ಇಂಡಿ : ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಎಲ್ಲಿಯೂ ಕುಡಿಯುವ ನೀರಿನ ತೊಂದರೆಯಾಗದoತೆ ನೋಡಿಕೊಳ್ಳಲು ಕೃಷ್ಣಾ ಮೇಲ್ದಂಡೆ ಅಧಿಕಾರಿಗಳಿಗೆ ಮತ್ತು ಮುಖ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಭೂಬಾಲನ ಹೇಳಿದರು.
ಪಟ್ಟಣದ ಮಿನಿ ವಿಧಾನಸೌಧದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿದ್ದರು.
ಪುರಸಭೆಯವರು ನಗರದಲ್ಲಿ ಸ್ವಚ್ಚತೆ ಕಾಪಾಡಬೇಕು ಮತ್ತು ಪಶು ಸಂಗೋಪನಾ ಇಲಾಖೆಯವರು ದನ ಮತ್ತು ಜಾನುವಾರುಗಳಿಗೆ ಮೇವಿನ ತೊಂದರೆಯಾದAತೆ ನಿಗಾವಹಿಸಲು ತಿಳಿಸಿದರು.
ಸಿಇಒ ರಿಷಿ ಆನಂದ, ಕಂದಾಯ ಉಪವಿಭಾಗಾಧಿಕಾರಿ ಅನುರಾಧಾ ವಸ್ತçದ ತಹಸೀಲ್ದಾರ ಬಿ.ಎಸ್.ಕಡಕಬಾವಿ ಮಾತನಾಡಿದರು.
ಜಿಲ್ಲಾಧಿಕಾರಿಗಳು ವಿವಿಧ ಕಾಮಗಾರಿಗಳಾದ ಮೇಘಾ ಮಾರುಕಟ್ಟೆ, ಕೃಷಿ ವಿಜ್ಞಾನ ಕೇಂದ್ರ, ತಾಲೂಕಾ ಆಸ್ಪತ್ರೆ, ಮಿನಿ ವಿಧಾನಸೌಧಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಇಂಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೆಘಾ ಮಾರುಕಟ್ಟೆ ಕಾಮಗಾರಿಯನ್ನು ಪರಿಶೀಲನೆ ನಡೆಸಿ, ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು. ಕಾಮಗಾರಿಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸುವಂತೆ ಸಂಬAಧಿಸಿದವರಿಗೆ ಅವರು ಸೂಚನೆ ನೀಡಿದರು.
ಕೃಷಿ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಲಿಂಬೆ ಅಭಿವೃದ್ದಿ ಮಂಡಳಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದರು. ಮಹಾವೀಕ ವೃತ್ತಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ರಸ್ತೆ ಕಾಮಗಾರಿಗಳ ಕುರಿತು ಅಗತ್ಯ ಸೂಚನೆ ನೀಡಿದರು. ನಂತರ ವಾರ್ಡ ನಂ.೧೦ರಲ್ಲಿ ಗ್ರಂಥಾಲಯ ನಿರ್ಮಾಣಕ್ಕಾಗಿ ಹಳೆಯ ಗ್ರಂಥಾಲಯ ಜಾಗವನ್ನು ಪರಿಶೀಲನೆ ನಡೆಸಿದರು.
ಕೃಷಿ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ, ಪುರಸಭೆ ಮುಖ್ಯಾಧಿಕಾರಿ ಶಿವಾನಂದ ಪೂಜಾರಿ,ಹೆಸ್ಕಾಂ ಎಸ್.ಆರ್. ಮೆಂಡೆದಾರ, ಚಡಚಣ ಎಇಇ ವಿ,ಆರ್.ಹವಾಲದಾರ, ತೋಟಗಾರಿಕೆ ಸಹಾಯಕ ನಿರ್ದೇಶಕ ಎಚ್.ಎಸ್.ಪಾಟೀಲ,ಸಿಡಿಪಿಒ ಗೀತಾ ಗುತ್ತರಗಿಮಠ , ಅರಣ್ಯ ಇಲಾಖೆ ಎಸ್.ಜಿ. ಸಂಗಾಲಕ, ಮಂಜುನಾಥ ಧುಳೆ ಮತ್ತಿತರಿದ್ದರು.