ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿ ಭಾಷಣ ಮಾಡದೆ ತಮಿಳುನಾಡು ರಾಜ್ಯಪಾಲ ಆರ್ಎನ್ ರವಿ ಸದನದಿಂದ ಹೊರ ನಡೆದಿರುವ ಘಟನೆ ನಡೆದಿದೆ. 2025 ರ ತಮಿಳುನಾಡು ವಿಧಾನಸಭೆಯ ಮೊದಲ ವಿಧಾನಸಭೆ ಅಧಿವೇಶನ ಇಂದಿನಿಂದ ಆರಂಭವಾಗಿದೆ. ನಿಯಮಗಳ ಪ್ರಕಾರ ರಾಜ್ಯಪಾಲ ಆರ್.ಎನ್.ರವಿ ಅವರ ಭಾಷಣದೊಂದಿಗೆ ವಿಧಾನಸಭೆ ಅಧಿವೇಶನ ಆರಂಭವಾಗಬೇಕಿತ್ತು. ಮಾಧ್ಯಮ ವರದಿಗಳ ಪ್ರಕಾರ, ವಿಧಾನಸಭೆ ಅಧಿವೇಶನದ ಆರಂಭದಲ್ಲಿ ರಾಷ್ಟ್ರಗೀತೆ ಬದಲು ರಾಜ್ಯ ಗೀತೆಯನ್ನು ಹಾಡಲಾಯಿತು.
ಎಲ್ಲಾ ರಾಜ್ಯಗಳ ವಿಧಾನಸಭಾ ಅಧಿವೇಶನದ ಆರಂಭದಲ್ಲಿ ಮತ್ತು ಕೊನೆಯಲ್ಲಿ ರಾಷ್ಟ್ರಗೀತೆಯನ್ನು ಹಾಡಲಾಗುತ್ತದೆ. ಇಂದು ರಾಜ್ಯಪಾಲರು ಸದನಕ್ಕೆ ಆಗಮಿಸಿದಾಗ ಕೇವಲ ರಾಜ್ಯಗೀತೆ ಮಾತ್ರ ಹಾಡಲಾಯಿತು. ರಾಷ್ಟ್ರಗೀತೆ ಹಾಡುವ ಬಗ್ಗೆ ರಾಜ್ಯಪಾಲರು ಮಾಡಿರುವ ಮನವಿಯನ್ನು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ಸದನದ ಸ್ಪೀಕರ್ ತಿರಸ್ಕರಿಸಿದರು. ಭಾರತದ ಸಂವಿಧಾನಕ್ಕೆ ಮಾಡಿದ ಅವಮಾನದ ಭಾಗವಾಗದೆ ರಾಜ್ಯಪಾಲರು ತೀವ್ರ ಅಸಮಾಧಾನ ವ್ಯಕ್ತಪಡಿಸಿ ಸದನದಿಂದ ನಿರ್ಗಮಿಸಿದರು