ಪಾಟ್ನಾ: ಕಾಂಗ್ರೆಸ್ ನೇತೃತ್ವದ INDIA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾವನ್ನು ಶೇ.85ಕ್ಕೆ ಏರಿಕೆ ಮಾಡುವುದಾಗಿ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.
ಬಿಹಾರದ ಮೋತಿಹಾರಿಯಲ್ಲಿ ನಡೆಯುತ್ತಿರುವ ಮತದಾರರ ಅಧಿಕಾರ ಯಾತ್ರೆಯ ಅಂಗವಾಗಿ ಸಂವಿಧಾನ ಸುರಕ್ಷಾ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ತೇಜಸ್ವಿಯಾದವ್, ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಂವಿಧಾನವನ್ನು ದುರ್ಬಲಗೊಳಿಸುತ್ತಿದೆ. ಜನರು ತಮ್ಮ ಹಕ್ಕುಗಳನ್ನು ಕಾಪಾಡಲು ಒಂದಾಗಬೇಕು ಎಂದು ಹೇಳಿದರು.
ಈಗ ಮತ ಕಳ್ಳತನ.. ಮುಂದೆ ಸರ್ಕಾರದ ಕ್ರಮಗಳು ಕ್ರಮೇಣ ನಾಗರಿಕರ ಹಕ್ಕುಗಳನ್ನು ಕಸಿದುಕೊಳ್ಳಬಹುದು.
ಮೊದಲು, ಅವರು ನಿಮ್ಮ ಮತವನ್ನು, ನಂತರ ನಿಮ್ಮ ಪಡಿತರವನ್ನು, ನಂತರ ನಿಮ್ಮ ಪಿಂಚಣಿಯನ್ನು ಮತ್ತು ಅಂತಿಮವಾಗಿ ನಿಮ್ಮ ಆಸ್ತಿಗಳನ್ನು ಕಸಿದುಕೊಳ್ಳುತ್ತಾರೆ. ಪ್ರಜಾಪ್ರಭುತ್ವವನ್ನು ಸರ್ವಾಧಿಕಾರದಿಂದ ಬದಲಾಯಿಸಲಾಗುತ್ತದೆ ಎಂದರು.