ಎರಡು ದಿನಗಳಿಂದ ಕರ್ನಾಟಕದಾದ್ಯಂತ ಮಳೆಯ ಪ್ರಮಾಣ ಕೊಂಚ ಕಡಿಮೆ

Ravi Talawar
ಎರಡು ದಿನಗಳಿಂದ ಕರ್ನಾಟಕದಾದ್ಯಂತ ಮಳೆಯ ಪ್ರಮಾಣ ಕೊಂಚ ಕಡಿಮೆ
WhatsApp Group Join Now
Telegram Group Join Now

ಬೆಂಗಳೂರು: ಕಳೆದ ಎರಡು ದಿನಗಳಿಂದ ಕರ್ನಾಟಕದಾದ್ಯಂತ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಉಳಿದೆಡೆ ಮಳೆ ಕಡಿಮೆ ಇರಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ನಿತ್ಯ ತುಂತುರು ಮಳೆಯಾಗುತ್ತಿದೆ. ಎಚ್​ಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

WhatsApp Group Join Now
Telegram Group Join Now
Share This Article