ಬಾರಾಮುಲ್ಲಾ, ಏಪ್ರಿಲ್ 23: ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಒಳನುಸುಳಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಸೇನೆ ಸದೆಬಡಿದಿದೆ. ಜಮ್ಮು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ನಿನ್ನೆ ನಡೆದ ಉಗ್ರರ ದಾಳಿ ಬಳಿಕ ಸೇನೆಯು ಭದ್ರತೆಯನ್ನು ಮತ್ತಷ್ಟು ಬಲಪಡಿಸಿದೆ. ಉಗ್ರರು 26 ಮಂದಿಯನ್ನು ಕೊಂದಿದ್ದರು. ಪ್ರಮುಖವಾಗಿ ಹಿಂದೂಗಳನ್ನೇ ಟಾರ್ಗೆಟ್ ಮಾಡಿದ್ದರು.
ಪಹಲ್ಗಾಮ್ನಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದರು. ಪುರುಷರ ಪ್ಯಾಂಟ್ ಬಿಚ್ಚಿಸಿ ಅವರು ಹಿಂದೂ ಎಂದು ಖಚಿತಪಡಿಸಿಕೊಂಡು ಕೊಲೆ ಮಾಡಿದ್ದಾರೆ. ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.