ಯುವತಿ ಮೇಲೆ ಸಮೂಹಿಕ ಅತ್ಯಾಚಾರ: 24 ಗಂಟೆಗಳಲ್ಲಿ ಮೂವರ ಬಂಧನ

Ravi Talawar
ಯುವತಿ ಮೇಲೆ ಸಮೂಹಿಕ ಅತ್ಯಾಚಾರ: 24 ಗಂಟೆಗಳಲ್ಲಿ ಮೂವರ ಬಂಧನ
WhatsApp Group Join Now
Telegram Group Join Now

ಮಂಗಳೂರು, ಏಪ್ರಿಲ್​ 17: ಮಂಗಳೂರು  ಹೊರವಲಯದ ಕಲ್ಲಾಪು ನಿರ್ಜನ ಪ್ರದೇಶದಲ್ಲಿ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಪತ್ತೆಯಾದ ಅಂತರರಾಜ್ಯ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ 24 ಗಂಟೆಯೊಳಗೆ ಉಳ್ಳಾಲ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮುಲ್ಕಿ ಮೂಲದ ಆಟೋ ಚಾಲಕ ಪ್ರಭುರಾಜ್(38), ಮಣಿ ಮತ್ತು ಕುಂಪಲದ ಮಿಥುನ್(30) ಬಂಧಿತ ಆರೋಪಿಗಳು.

ಪ್ರಕರಣ ಸಂಬಂಧ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾತನಾಡಿ, “ಬುಧವಾರ (ಏ.16) ರಾತ್ರಿ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದೆ. ಮಧ್ಯರಾತ್ರಿ 1.30ರ ಸುಮಾರಿಗೆ 112ಗೆ ಯುವತಿಯೊಬ್ಬಳು ಕೂಗಾಡುತ್ತಿದ್ದಾಳೆ, ಆಕೆಗೆ ಹಲ್ಲೆ ಮಾಡಿದ್ದಾರೆ ಎಂದು ಕರೆ ಬಂದಿತ್ತು. ತಕ್ಷಣ ನಮ್ಮ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಯುವತಿಯನ್ನು ಆಸ್ಪತ್ರೆಗೆ ಕರೆತಂದಿದ್ದಾರೆ. ಯುವತಿ ಮಾತನಾಡುವ ಸ್ಥಿತಿಯಲ್ಲಿರದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿಯ ಹೇಳಿಕೆ ಪ್ರಕಾರ ಬುಧವಾರ ರಾತ್ರಿ ಯಾರೋ ಅವರಿಗೆ ಮದ್ಯಪಾನ ಮಾಡಿಸಿದ್ದಾರೆ. ಕಾರಿನಲ್ಲಿ ಮೂವರು ಇದ್ದಿದ್ದಾಗಿ ಯುವತಿ ಹೇಳಿಕೆ ನೀಡಿದ್ದಾರೆ. ಯುವತಿಗೆ ಪ್ರಜ್ಞೆ ಬಂದ ಬಳಿಕ ಒಳ ಉಡುಪು ಇರಲಿಲ್ಲ ಅಂತ ಹೇಳಿದ್ದಾರೆ” ಎಂದು ತಿಳಿಸಿದರು.

WhatsApp Group Join Now
Telegram Group Join Now
Share This Article