ಬೆಂಗಳೂರು, ಅ.8: ಕೌಶಲ್ಯ ಅಭಿವೃದ್ಧಿ ಇಲಾಖೆ ಕರ್ನಾಟಕದ ಯುವಕರು ವಿದೇಶಗಳಲ್ಲಿ ಉದ್ಯೋಗ ಪಡೆಯಲು ಸಹಾಯ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಜರ್ಮನ್ ಭಾಷೆಯಲ್ಲಿ ವಿದೇಶಿ ಭಾಷಾ ಪರೀಕ್ಷಾ ಕೇಂದ್ರವನ್ನು ಸ್ಥಾಪಿಸಲು ನಿರ್ಧರಿಸಿದೆ. ಈ ಮೂಲಕ ಜರ್ಮನ್ ಭಾಷೆಯಲ್ಲಿ ಕೋರ್ಸ್ಗಳನ್ನು ನೀಡುವುದು ಹಾಗೂ ಪರೀಕ್ಷೆಗಳನ್ನು ನಡೆಸುವ ಏಕೈಕ ಕೇಂದ್ರವಾಗಿದೆ. ಬೆಂಗಳೂರಿನ ಗೋಥೆ ಇನ್ಸ್ಟಿಟ್ಯೂಟ್ನಲ್ಲಿ ಜರ್ಮನ್ ಭಾಷೆಯಲ್ಲಿ ಪರೀಕ್ಷೆ ನಡೆಸುವುದು ಹಾಗೂ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಲಾಗುವುದು ಎಂದು ಕೌಶಲ್ಯ ಅಭಿವೃದ್ಧಿ ಇಲಾಖೆ ತಿಳಿಸಿದೆ. ರಾಜ್ಯದ ಆರೋಗ್ಯ ಸಿಬ್ಬಂದಿಗಳಿಗೂ ಕೂಡ ಜರ್ಮನ್ ಭಾಷೆಯಲ್ಲೇ ತರಬೇತಿ ನೀಡಲು ಮುಂದಾಗಿದೆ. ಯಾಕೆಂದರೆ ಜರ್ಮನ್ನಲ್ಲಿ ನರ್ಸ್ಗಳ ಅವಶ್ಯಕತೆ ಹೆಚ್ಚಿದೆ. ಈ ಕಾರಣಕ್ಕಾಗಿ ಕೋರ್ಸ್ನಲ್ಲಿ ಇವರಿಗೂ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ.