ಬೆಂಗಳೂರು,20: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರ್ಕಾರ ಸಂಚು ರೂಪಿಸಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.
ವಕೀಲ ದೇವರಾಜೇಗೌಡರ ಜತೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಂಡ್ಯದ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು ನಡೆಸಿರುವ ಮೊಬೈಲ್ ಸಂಭಾಷಣೆ ವೈರಲ್ ಆದ ಬೆನ್ನಲ್ಲೇ ಜೆಡಿಎಸ್ ಪಕ್ಷವು ತನ್ನ ಎಕ್ಸ್ ಖಾತೆಯಲ್ಲಿ ಡಿಸಿಎಂ ಡಿಕೆಶಿ ವಿರುದ್ಧ ನೇರ ವಾಗ್ದಾಳಿ ನಡೆಸಿದೆ.
ಹೊಂಚು ಹಾಕಿ ಸಂಚು ಮಾಡುವ ಕಾಂಗ್ರೆಸ್ ಅಸಲಿ ಮುಖ ಕಳಚಿ ಕೆಳಕ್ಕೆ ಬಿದ್ದಿದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ… ಹೌದಲ್ಲವೇ ಕಾಂಗ್ರೆಸ್ಸಿಗರೇ? ಸತ್ಯ ನಿಮ್ಮ ಮುಂದೆಯೇ ಇದೆ. ನಿಮ್ಮ ಅಧ್ಯಕ್ಷರೇ ಪೆನ್ ಡ್ರೈವ್ ಫ್ಯಾಕ್ಟರಿಯ ಒರಿಜಿನಲ್ ಓನರ್. ಸಿಡಿ ಶಿವಕುಮಾರ್ ಗ್ಯಾಂಗ್ ನಡೆಸಿದ ಪೆನ್ ಡ್ರೈವ್ ಹಂಚಿಕೆಯ ಹೇಯ ಕೃತ್ಯದ ಸಂಚುಗಳೇ ಅವೆಲ್ಲಾ. ದೇವರಾಜೇಗೌಡರ ಹೇಳಿಕೆಯ ನಂತರ ಹೊರಬಿದ್ದಿರುವ ಆಡಿಯೋ ಟೇಪುಗಳೇ ಮಹಾಸಂಚಿನ ಮಹಾಕಥೆಯನ್ನು ಬಿಚ್ಚಿಟ್ಟಿವೆ. ಈಗ ಹೇಳಿ, ಯಾರು ಮೆಂಟಲ್? ಎಂದು ತೀಕ್ಷ್ಣವಾಗಿ ಪ್ರಶ್ನಿಸಿದೆ.