ರಾಜ್ಯದಲ್ಲಿರುವುದು ಭ್ರಷ್ಟ ಕಾಂಗ್ರೆಸ್ ಸರ್ಕಾರ : ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಆರೋಪ

Ravi Talawar
ರಾಜ್ಯದಲ್ಲಿರುವುದು ಭ್ರಷ್ಟ ಕಾಂಗ್ರೆಸ್ ಸರ್ಕಾರ : ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಆರೋಪ
WhatsApp Group Join Now
Telegram Group Join Now
 ಬಳ್ಳಾರಿ ಜೂ.01. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕಳೆದ 2 ವರ್ಷಗಳಿಂದ ಜನರಿಗೆ ಉತ್ತಮ  ಆಡಳಿತ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ, ಬದಲಿಗೆ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ ಇದಕ್ಕೆ ನಿದರ್ಶನ ಎಂಬಂತೆ ಕಾಂಗ್ರೆಸ್ ಶಾಸಕರಾದ ಬಿ ಆರ್ ಪಾಟೀಲ್ ಅವರೇ ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿರುವುದೇ ಆಗಿದೆ ಕಾಂಗ್ರೆಸ್ ಸರ್ಕಾರ ಕೂಡಲೇ ಆಡಳಿತ ಬಿಟ್ಟು ತೊಲಗಬೇಕೆಂದು ಮೀನಳ್ಳಿ ತಾಯಣ್ಣ  ಒತ್ತಾಯಿಸಿದರು.
 ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರತಿಭಟನೆಯನ್ನು ನಡೆಸಿ ಮಾತನಾಡಿ, ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಲಂಚಗುಳಿತನ, ಭ್ರಷ್ಟಾಚಾರವು ಹೆಚ್ಚುತ್ತಿದ್ದು. ಸ್ವಜನ ಪಕ್ಷಪಾತ ತುಂಬಿ ತುಳುಕುತ್ತಿದೆ
ಈ ಬಗ್ಗೆ ರಾಜ್ಯ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು ಮತ್ತು ಮುಖಂಡರುಗಳು ರಾಜ್ಯ ಸರ್ಕಾರದ ಮತ್ತು ಸಚಿವರುಗಳ ವಿರುದ್ಧ ಬಹಿರಂಗವಾಗಿ ಸಾಕ್ಷಿ ಸಮೇತ ದಾಖಲೆಗಳೊಂದಿಗೆ ಮಾಧ್ಯಮಗಳಲ್ಲಿ ಆರೋಪಿಸಿದ್ದಾರೆ.
ಇದಲ್ಲದೆ, ರಾಜ್ಯ ಸರ್ಕಾರ ಇದುವರೆಗೂ ರಾಜ್ಯದ ಜನತೆಗೆ ಮೂಲಭೂತ ಸೌಕರ್ಯಗಳಾದ ರಸ್ತೆ, ಸೇತುವೆ, ಕೆರೆ ಕಟ್ಟೆಗಳ ಪುರ್ನಾತ್ಥಾನ. ಒಳಚರಂಡಿ ವ್ಯವಸ್ಥೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮುಂತಾದವುಗಳನ್ನು ಒದಗಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿರುತ್ತದೆ ಅಂತೆಯೇ, ಗುತ್ತಿಗೆದಾರರ ಬಿಲ್ ನ ಬಾಕಿ ಹಣ   ಪಾವತಿ ಮಾಡುವಲ್ಲಿಯೂ ಸಹ ವಿಳಂಬ ಮಾಡುತ್ತಾ ಬಂದಿದ್ದು ಬಡವರ ಹಾಗೂ ರೈತ ವಿರೋಧಿ ಸರ್ಕಾರವಾಗಿ ಮಾರ್ಪಟ್ಟಿರುತ್ತದೆ. ಪರಿಶಿಷ್ಟರಿಗೆ ಮೀಸಲಾಗಿರುವ ಹಣದಲ್ಲಿಯೂ ಸಹ ತಾರತಮ್ಯವೆಸಗುತ್ತಿದ್ದು, ಆ ವರ್ಗದ ಜನರಿಗೆ ಅನ್ಯಾಯ ಎಸುಗುತ್ತಿದೆ, ಸರ್ಕಾರ ಕೇವಲ ಕೆಲವೇ ಕೆಲವು ಸಮುದಾಯಗಳನ್ನು ಮತ್ತು ವ್ಯಕ್ತಿಗಳನ್ನು ತುಷ್ಟಿಕರಿಸಲು ಹೆಣಗಾಡುತ್ತಿದ್ದಾರೆ ಇದರಿಂದ ರಾಜ್ಯದಲ್ಲಿ ಉಳಿದ ಜನಾಂಗ ಮತ್ತು ಜನರಿಗೆ ಅನ್ಯಾಯವಾಗುತ್ತದೆ ಕೂಡಲೇ ಸರ್ಕಾರ ಈ ತಾರತಮ್ಯ ನೀತಿಯನ್ನು ಕೈಬಿಡಬೇಕು ಎಂದು ಸರ್ಕಾರವನ್ನು ಮೀನಳ್ಳಿ ತಾಯಣ್ಣ ಒತ್ತಾಯಿಸಿದರು.
ಕಾಂಗ್ರೆಸ್ ಪಕ್ಷದ ಹಿರಿಯ ಶಾಪಕರು, ರಾಜ್ಯ ಸರ್ಕಾರ ಕಳೆದ 2 ವರ್ಷಗಳಿಂದ ಯಾವುದೇ, ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳದೆ, ಜನರನ್ನು ವಂಚಿಸುತ್ತಿದ್ದಾರೆ ಎಂದರು  ಆರೋಪಿಸಿದ್ದಾರೆ.
 ವಸತಿ ಇಲಾಖೆಯ  ಭ್ರಷ್ಟಾಚಾರ ಹೊತ್ತಿರುವ  ಬಿ.ಝಡ್. ಜಮೀರ್ ಅಹಮದ್ ಖಾನ್ ರವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಸಂದರ್ಭದಲ್ಲಿ ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು.
 ಈ ಸಂದರ್ಭದಲ್ಲಿ  ಜಾತ್ಯತೀತ ಜನತಾದ ರಾಜ್ಯ ಯುವ ಘಟಕ ಅಧ್ಯಕ್ಷರಾದ, ಜಿಲ್ಲಾ ಯುವ ಘಟಕ ಅಧ್ಯಕ್ಷ ಕಿರಣ್ ಕುಮಾರ್   ರಾಜು ನಾಯಕ್,  ರೈತ ವಿಭಾಗದ ಅಧ್ಯಕ್ಷರು ಲಕ್ಷ್ಮೀಕಾಂತ ರೆಡ್ಡಿ, ಮಹಿಳಾ ಅಧ್ಯಕ್ಷರಾದ ಪುಷ್ಪಾ,ಜಮೀಲಾ, ಬಳ್ಳಾರಿ ನಗರ ಘಟಕದ ಅಧ್ಯಕ್ಷರಾದ ಹೊನ್ನೂರು ಸ್ವಾಮಿ (ವಂಡ್ರಿ), ಬಳ್ಳಾರಿ ಗ್ರಾಮಾಂತರ ಅಧ್ಯಕ್ಷರಾದ ಅಶೋಕ ಸಂಗನಕಲ್ಲು, ಕಂಪ್ಲಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಏಳಕ್ಕೆ ಮೇಘರಾಜ , ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಶಿವ ನಾರಾಯಣ, ಯಲ್ಲನಗೌಡ, ಕಿರಣ್, ಮುತ್ತು, ವಿಜಯ ಕುಮಾರ್, ರಾಮಾಂಜನೇಯ, ಜಾವೀದ್, ಶಬಾನಾ,ಹಾಜಿಬಾಯ್,ಚರಕುಂಟೆ ಈರಣ್ಣ, ಗುರುಸ್ವಾಮಿ, ಬಸವ ಅವಾಂಬಾವಿ, ಹಾಗೂ ಇತರ ಪದಾಧಿಕಾರಿಗಳು ಮತ್ತು ಕಾಯ೯ಕತ೯ರುಗಳು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article