ನೇಸರಗಿ. ಸಮೀಪದ ಮದನಬಾವಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷರಾದ ಬಸನಗೌಡ ಗೌಡಪ್ಪ ದೊಡ್ಡಗೌಡ್ರ (84) ಅವರು ಮಂಗಳವಾರದಂದು ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಶೋಕ ವ್ಯಕ್ತಪಡಿಸಿದ್ದಾರೆ.