18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24 ರಂದು ಆರಂಭ: ಸಚಿವ ಕಿರಣ್ ರಿಜಿಜು

Ravi Talawar
18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24 ರಂದು ಆರಂಭ: ಸಚಿವ ಕಿರಣ್ ರಿಜಿಜು
WhatsApp Group Join Now
Telegram Group Join Now

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24 ರಂದು ಆರಂಭವಾಗಲಿದ್ದು, ಹೊಸದಾಗಿ ಚುನಾಯಿತ ಸದಸ್ಯರ ಪ್ರಮಾಣ ವಚನ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಬುಧವಾರ ತಿಳಿಸಿದ್ದಾರೆ.

ಅಧಿವೇಶನದ ಮೊದಲ ಮೂರು ದಿನಗಳಲ್ಲಿ ಹೊಸದಾಗಿ ಆಯ್ಕೆಯಾದ ನಾಯಕರು ಪ್ರಮಾಣ ವಚನ ಸ್ವೀಕರಿಸುತ್ತಾರೆ ಮತ್ತು ಸ್ಪೀಕರ್ ಆಯ್ಕೆ ನಡೆಯಲಿದೆ. ಜುಲೈ 3ರಂದು ಅಧಿವೇಶನ ಮುಕ್ತಾಯವಾಗಲಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜೂನ್ 27 ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಹೊಸ ಸರ್ಕಾರದ ಮುಂದಿನ ಐದು ವರ್ಷಗಳ ಮಾರ್ಗಸೂಚಿಯನ್ನು ರೂಪಿಸುವ ಸಾಧ್ಯತೆಯಿದೆ.

’18ನೇ ಲೋಕಸಭೆಯ ಮೊದಲ ಅಧಿವೇಶನವನ್ನು ಜೂನ್ 24 ರಿಂದ ಜುಲೈ 3ರವರೆಗೆ ನಡೆಯಲಿದೆ. ಈ ವೇಳೆ ಹೊಸದಾಗಿ ಚುನಾಯಿತ ಸದಸ್ಯರ ಪ್ರಮಾಣ ವಚನ, ಸ್ಪೀಕರ್ ಆಯ್ಕೆ, ರಾಷ್ಟ್ರಪತಿಗಳ ಭಾಷಣ ಮತ್ತು ಚರ್ಚೆ ನಡೆಯಲಿದೆ’ ಎಂದು ರಿಜಿಜು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ರಾಜ್ಯಸಭೆಯ 264ನೇ ಅಧಿವೇಶನ ಕೂಡ ಜೂನ್ 27 ರಂದು ಆರಂಭವಾಗಿ ಜುಲೈ 3 ರಂದು ಮುಕ್ತಾಯವಾಗಲಿದೆ ಎಂದು ಅವರು ಹೇಳಿದರು.

ಜೂನ್ 27 ರಂದು ರಾಷ್ಟ್ರಪತಿಗಳ ಭಾಷಣದ ನಂತರ ಪ್ರಧಾನಿ ಮೋದಿ ಅವರು ತಮ್ಮ ಸಚಿವ ಸಂಪುಟವನ್ನು ಸಂಸತ್ತಿಗೆ ಪರಿಚಯಿಸುವ ನಿರೀಕ್ಷೆಯಿದೆ.

ಸಂಸತ್ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಸಂಬಂಧಿಸಿದಂತೆ ಪ್ರಧಾನಿ ಉತ್ತರ ನೀಡಲಿದ್ದಾರೆ.

WhatsApp Group Join Now
Telegram Group Join Now
Share This Article