ವೀರಪ್ಪನ್ ಓಡಾಡಿದ್ದ ಜಾಗದಲ್ಲಿ ಸಫಾರಿಗೆ ಅರಣ್ಯ ಇಲಾಖೆ ಚಿಂತನೆ!

Ravi Talawar
ವೀರಪ್ಪನ್ ಓಡಾಡಿದ್ದ ಜಾಗದಲ್ಲಿ ಸಫಾರಿಗೆ ಅರಣ್ಯ ಇಲಾಖೆ ಚಿಂತನೆ!
WhatsApp Group Join Now
Telegram Group Join Now

ಬೆಂಗಳೂರು, ಜನವರಿ 6: ಕಾಡುಗಳ್ಳ ವೀರಪ್ಪನ್ ಪೊಲೀಸರ ಗುಂಡಿಗೆ ಬಲಿಯಾಗಿ ಎರಡು ದಶಕಗಳೇ ಸಂದಿವೆ. ಆದರೂ ಆತನ ಹೆಸರು ಇಂದಿಗೂ ರಾಜ್ಯದಲ್ಲಿ ಪ್ರಚಲಿತದಲ್ಲಿದೆ. ವರನಟ ಡಾ. ರಾಜ್​ಕುಮಾರ್ ಅಪಹರಣದಿಂದ ಕರ್ನಾಟಕದಲ್ಲಿ ಮನೆಮಾತಾಗಿದ್ದ ವೀರಪ್ಪ ಓಡಾಡಿದ್ದ ಕಾಡಿನಲ್ಲಿ ಸಫಾರಿ ಆರಂಭಿಸುವ ಮೂಲಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಇದೀಗ ರಾಜ್ಯ ಸರ್ಕಾರ ಮುಂದಾಗಿದೆ ಎಂದು ವರದಿಯಾಗಿದೆ.

ಉದ್ದೇಶಿತ ಸಫಾರಿಯು 22 ಕಿಲೋಮೀಟರ್ ಅರಣ್ಯ ವ್ಯಾಪ್ತಿಯನ್ನು ಒಳಗೊಂಡಿರಲಿದೆ. ವಿಶೇಷವಾಗಿ, ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿನ ವೀರಪ್ಪನ್ ಅಡಗುತಾಣಗಳನ್ನು ಒಳಗೊಂಡಿರಲಿವೆ ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್’ ವರದಿ ಮಾಡಿದೆ. ಈ ಪ್ರದೇಶವು ಆನೆಗಳು, ಜಿಂಕೆಗಳು, ಕರಡಿಗಳು ಮತ್ತು ಇತರ ವನ್ಯಜೀವಿಗಳ ಹೆಚ್ಚಿನ ಇರುವಿಕೆಯನ್ನು ಹೊಂದಿವೆ ಎಂದು ವರದಿ ಉಲ್ಲೇಖಿಸಿದೆ.

WhatsApp Group Join Now
Telegram Group Join Now
Share This Article