ನವೆಂಬರ್‌ನಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ಕುತ್ತು: ಗುಳೇದಗುಡ್ಡದ ನೀಲಕಂಠ ಸ್ವಾಮೀಜಿ ಭವಿಷ್ಯ

Ravi Talawar
ನವೆಂಬರ್‌ನಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ಕುತ್ತು: ಗುಳೇದಗುಡ್ಡದ ನೀಲಕಂಠ ಸ್ವಾಮೀಜಿ ಭವಿಷ್ಯ
WhatsApp Group Join Now
Telegram Group Join Now

ಬೆಂಗಳೂರು, ಅಕ್ಟೋಬರ್ 7:  ‘ಧರ್ಮ ಒಡೆಯುವ ಕೆಲಸಕ್ಕೆ ಕೈ ಹಾಕಿದರೆ ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಳ್ಳಲಿದ್ದಾರೆ. ಕೆಲವು ಸಚಿವರು ಆ ಕಡೆ, ಕೆಲವು ಸಚಿವರು ಈ ಕಡೆ ಇದ್ದಾರೆ. ನವೆಂಬರ್​ನಲ್ಲಿ ಇದರಿಂದಲೇ ಸಿಎಂ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ’ ಎಂದು ಬಸವ ಸಂಸ್ಕೃತಿ ಅಭಿಯಾನದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾದ ಹಿನ್ನೆಲೆ ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡದ ಅಮರೇಶ್ವರ ಮಠದ ನೀಲಕಂಠೇಶ್ವರ ಸ್ವಾಮೀಜಿ ಹೇಳಿದ್ದಾರೆ.

ವೀರಶೈವ ಲಿಂಗಾಯತ ಮಠಾಧೀಶರ ಸೂಚನೆ ಮಧ್ಯೆಯೂ ಬಸವ ಸಂಸ್ಕೃತಿ ಅಭಿಯಾನದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾದ ಹಿನ್ನೆಲೆ ಹೇಳಿಕೆ ನೀಡಿರುವ ಸ್ವಾಮೀಜಿ, ‘ಸಿಎಂ ಪ್ರತ್ಯೇಕ ಲಿಂಗಾಯತ ಧರ್ಮ ಸಮಾರಂಭಕ್ಕೆ ಹೋಗಿರುವುದು ಒಂದು ಕಡೆ ಸಂತೋಷ , ಒಂದು ಕಡೆಗೆ ದುಃಖ ಆಗಿದೆ. ಬಸವಣ್ಣನ ಹೆಸರು ನಮ್ಮ ಮೆಟ್ರೋಗೆ ಇಡುವುದು, ಬಸವ ಕಲ್ಯಾಣದಲ್ಲಿ ವಚನ ವಿವಿ ಸ್ಥಾಪನೆ ಸೇರಿ ಕೆಲವು ವಿಷಯ ಸ್ವಾಗತಾರ್ಹವಾಗಿದೆ.

ಈ ಹಿಂದೆ ಸಿದ್ದರಾಮಯ್ಯನವರು ಒಂದುಗೂಡಿದ ಧರ್ಮ ಇಬ್ಬಾಗ ಮಾಡಲು ಹೋಗಿ ಕೈ ಸುಟ್ಟುಕೊಂಡಿದ್ದರು. ಈಗ ಜೇನು ಗೂಡಿಗೆ ಕೈ ಹಾಕಿ ಜೇನಿನಿಂದ ಕಚ್ಚಿಸಿಕೊಳ್ಳುವುದು ಬೇಡ ಎಂದು ಹೇಳಿದ್ದೆವು. ಆದರೂ ಆ ಸಭೆ (ಪ್ರತ್ಯೇಕ ಲಿಂಗಾಯತರ ಸ್ವಾಮೀಜಿಗಳ ಸಭೆ) ಗೆ ಹೋಗಿ ಪ್ರತ್ಯೇಕ ಧರ್ಮದ ಬಗ್ಗೆ ಹೇಳಿಕೆ ನೀಡದೇ ಜಾಣ ನಡೆ ಅನುಸರಿಸಿದ್ದಾರೆ. ಆದರೂ ಸಹ ಆ ಸಭೆಗೆ ಹೋಗಿದ್ದರಿಂದ ಸರ್ಕಾರಕ್ಕೆ ಸ್ವಲ್ಫ ಗೊಂದಲ ಉಂಟಾಗಿದೆ.

WhatsApp Group Join Now
Telegram Group Join Now
Share This Article