ಗೇಮ್ ಚೇಂಜರ್ ರಾಮ್ ಚರಣ್  256 ಅಡಿ ಎತ್ತರದ ದಾಖಲೆಯ ಕಟೌಟ್

Ravi Talawar
ಗೇಮ್ ಚೇಂಜರ್ ರಾಮ್ ಚರಣ್  256 ಅಡಿ ಎತ್ತರದ ದಾಖಲೆಯ ಕಟೌಟ್
WhatsApp Group Join Now
Telegram Group Join Now
     ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹುನಿರೀಕ್ಷಿತ ಸಿನಿಮಾ ‘ಗೇಮ್ ಚೇಂಜರ್’ ಬಿಡುಗಡೆಗೆ ಸಜ್ಜಾಗಿದೆ. ಅಮೆರಿಕಾದ ನೆಲದಲ್ಲಿ ಅದ್ಧೂರಿ ಪ್ರೀ-ರಿಲೀಸ್ ಇವೆಂಟ್ ಮಾಡುವ ಮೂಲಕ ಭಾರತೀಯ ಚಿತ್ರರಂಗದಲ್ಲಿ ಚಿತ್ರತಂಡ  ದಾಖಲೆ ಮಾಡಿದೆ. ಇದೀಗ ಚೆರ್ರಿ ಅಭಿಮಾನಿಗಳು ಕೂಡ ‘ಗೇಮ್ ಚೇಂಜರ್’ ಸಿನಿಮಾ ಮೂಲಕ ಹೊಸ ರೆಕಾರ್ಡ್ ಕ್ರಿಯೇಟ್ ಮಾಡಿದ್ದಾರೆ.
     ಜನವರಿ 10ರಂದು ‘ಗೇಮ್ ಚೇಂಜರ್’ ಚಿತ್ರ ಬಿಡುಗಡೆಯಾಗುತ್ತಿರುವ ಹಿನ್ನೆಲೆ ಆಂಧ್ರಪ್ರದೇಶದ ವಿಜಯವಾಡದಲ್ಲಿರುವ ಬೃಂದಾವನ ಕಾಲೋನಿಯ ವಜ್ರ ಗ್ರೌಂಡ್ಸ್‌ನಲ್ಲಿ ರಾಮ್‌ಚರಣ್ ಅವರ 256 ಅಡಿ ಎತ್ತರದ ಕಟೌಟ್‌ ನಿಲ್ಲಿಸಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ.  ಇದು ಭಾರತದ ಅತೀ ದೊಡ್ಡ ಕಟೌಟ್ ಎಂಬ ದಾಖಲೆಯಾಗಿದೆ ಎನ್ನಲಾಗಿದೆ.
     ನಾಲ್ಕು ವರ್ಷಗಳ ಹಿಂದೆ ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್‌ನಲ್ಲಿ ಅಭಿಮಾನಿಗಳು ರಾಕಿಂಗ್ ಸ್ಟಾರ್ ಯಶ್ ಅವರ 236 ಅಡಿ ಎತ್ತರದ ಕಟೌಟ್ ನಿಲ್ಲಿಸಿದ್ದರು. ಇದಕ್ಕೂ ಮುನ್ನ ತಮಿಳುನಾಡಿನಲ್ಲಿ ಸೂರ್ಯ ಅವರ ಅಭಿಮಾನಿಗಳು 215 ಅಡಿ ಎತ್ತರದ ಕಟೌಟ್ ನಿಲ್ಲಿಸಿ ದಾಖಲೆ ಬರೆದಿದ್ದರು. ಇನ್ನು ಕಳೆದ ವರ್ಷ ಪ್ರಭಾಸ್ ಅಭಿಮಾನಿಗಳು 230 ಅಡಿ ಕಟೌಟ್ ನಿಲ್ಲಿಸಿದ್ದು ಕೂಡ ದಾಖಲೆಯ ಪುಟಗಳಿಗೆ ಸೇರಿಕೊಂಡಿತ್ತು. ಇದೀಗ ರಾಮ್‌ಚರಣ್ ಅಭಿಮಾನಿಗಳು ಈ ಎಲ್ಲ ದಾಖಲೆಗಳನ್ನು ಮುರಿದು, ಚೆರ್ರಿಯ 256 ಅಡಿ ಎತ್ತರದ ಕಟೌಟ್‌ ನಿಲ್ಲಿಸಿ ಸಂಭ್ರಮಿಸಲು ರೆಡಿಯಾಗಿದ್ದಾರೆ.
     ತಮಿಳಿನ ಖ್ಯಾತ ನಿರ್ದೇಶಕ ಶಂಕರ್ ಗೇಮ್ ಚೇಂಜರ್ ಗೆ ಆಕ್ಷನ್ ಕಟ್ ಹೇಳಿದ್ದಾರೆ. ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಮತ್ತು ಜೀ ಸ್ಟುಡಿಯೋಸ್ ಬ್ಯಾನರ್‌ನಲ್ಲಿ ದಿಲ್ ರಾಜು ಮತ್ತು ಸಿರಿಶ್  ಈ ಚಿತ್ರವನ್ನು ನಿರ್ಮಿಸಿದ್ದಾರೆ. ಗೇಮ್ ಚೇಂಜರ್ ನಲ್ಲಿ ರಾಮ್ ಚರಣ್ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.  ಚಿತ್ರವು ತೆಲುಗು, ಕನ್ನಡ, ತಮಿಳು ಮತ್ತು ಹಿಂದಿಯಲ್ಲಿ ಜನವರಿ 10, 2025 ರಂದು ಅದ್ಧೂರಿಯಾಗಿ ಬಿಡುಗಡೆಯಾಗಲಿದೆ.
WhatsApp Group Join Now
Telegram Group Join Now
Share This Article