ಕೆಪಿಎಸ್ಸಿ ಅಕ್ರಮಕ್ಕೆ ಬ್ರೇಕ್‌! ಕಾಯ್ದೆ ತಿದ್ದುಪಡಿಗೆ ನಿರ್ಧರಿಸಿದ ಸರ್ಕಾರ

Ravi Talawar
ಕೆಪಿಎಸ್ಸಿ ಅಕ್ರಮಕ್ಕೆ ಬ್ರೇಕ್‌! ಕಾಯ್ದೆ ತಿದ್ದುಪಡಿಗೆ ನಿರ್ಧರಿಸಿದ ಸರ್ಕಾರ
WhatsApp Group Join Now
Telegram Group Join Now

ಬೆಂಗಳೂರು, ಮಾರ್ಚ್ 6: ಕರ್ನಾಟಕ ಲೋಕಸೇವಾ ಆಯೋಗದ ಅವ್ಯವಹಾರ, ಭ್ರಷ್ಟಾಚಾರ ಮತ್ತು ಒಂದರ ಮೇಲೊಂದು ಎಡವಟ್ಟುಗಳಿಂದ ಪ್ರಾಮಾಣಿಕ ಅಭ್ಯರ್ಥಿಗಳು ಬೇಸತ್ತು ಹೋಗಿದ್ದಾರೆ. ವ್ಯಾಪಕ ಆಕ್ರೋಶದ ಬಳಿಕ ಎಚ್ಚೆತ್ತಿರುವ ರಾಜ್ಯಸರ್ಕಾರ  ಇದೀಗ ಕೆಪಿಎಸ್ಸಿಗೆ ಕಾಯಕಲ್ಪ ನೀಡಲು ಮುಂದಾಗಿದೆ. ವಿಧಾನಸೌಧದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ಕೆಪಿಎಸ್ಸಿ ಕಾಯ್ದೆ 1959’ಕ್ಕೆ ತಿದ್ದುಪಡಿ ತರಲು ತೀರ್ಮಾನಿಸಿದೆ. ಈ ಅಧಿವೇಶನದಲ್ಲೇ ತಿದ್ದುಪಡಿ ಮಸೂದೆ ಮಂಡನೆಗೆ ನಿರ್ಧರಿಸಿದೆ.

ಈ ತಿದ್ದುಪಡಿ ಮಸೂದೆ ಪ್ರಕಾರ ನೇಮಕಾತಿ ಸಂದರ್ಶನ ಮಂಡಳಿಯಲ್ಲಿ ಆಯೋಗ ನಿಯೋಜಿಸಬಹುದಾದ ಒಬ್ಬ ಸದಸ್ಯ ಮಾತ್ರ ಇರಲಿದ್ದಾರೆ. ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ರಾಜ್ಯ ಗೆಜೆಟೆಡ್ ಪ್ರೊಬೇಷನರ್ಸ್ ನೇಮಕಾತಿ ನಿಯಮದಲ್ಲಿ ಇರುವಂತೆ ಸಂದರ್ಶನ ನಡೆಸಬೇಕು ಎಂದು ತಿದ್ದುಪಡಿ ಮಾಡಲಾಗುತ್ತದೆ.

ಪ್ರಸ್ತುತ ನಿಯಮದಲ್ಲಿ ಆಯೋಗ ನಿಯೋಜಿಸಿದ ಇಬ್ಬರು ಅಥವಾ ಹೆಚ್ಚು ಸದಸ್ಯರು ಅಭ್ಯರ್ಥಿಗಳ ಸಂದರ್ಶನ ನಡೆಸಬಹುದಾಗಿದೆ. ಈ ಸಂದರ್ಶನದ ಫಲಿತಾಂಶಗಳನ್ನು ಆಯೋಗದ ಮುಂದೆ ಮಂಡಿಸಿ, ಅಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಬೇಕು ಎಂಬ ಅಂಶ ಇದೆ. ಇದು ಸ್ವಜನ ಪಕ್ಷಪಾತ, ಅಕ್ರಮಕ್ಕೆ ಎಡೆ ಮಾಡಿ ಕೊಟ್ಟಿದೆ ಎಂಬ ಆರೋಪವಿತ್ತು. ಅದನ್ನು ಬದಲಾಯಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ತಿದ್ದುಪಡಿಯಂತೆ ಆಯೋಗದ ಸಭೆಗೆ ಅಧ್ಯಕ್ಷರನ್ನು ಸೇರಿಸಿ ಒಟ್ಟು ಸದಸ್ಯರ ಪೈಕಿ ಶೇ 50ರಷ್ಟು ಕೋರಂ ಅಗತ್ಯ ಇದೆ ಎಂದು ಬದಲಾಯಿಸಲಾಗುವುದು‌. ಈ ಹಿಂದೆ ಅಧ್ಯಕ್ಷರು ಇಲ್ಲದಿದ್ದರೂ ಶೇ 50ರಷ್ಟು ಎಂದಿತ್ತು. ಆಯೋಗದ ಎಲ್ಲ ನಿರ್ಣಯಗಳು ಎಲ್ಲ ಸದಸ್ಯರಿಗೂ ಮುಕ್ತ ಆಗಿರಬೇಕು. ಒಂದು ವೇಳೆ ಆಯೋಗದ ನಿರ್ಣಯಗಳ ಸಂಬಂಧ ಸದಸ್ಯ ಭಿನ್ನಾಭಿಪ್ರಾಯ ಹೊಂದಿದ್ದರೆ, ಅದಕ್ಕೆ ಕಾರಣದೊಂದಿಗೆ ದಾಖಲಿಸಬೇಕು.

WhatsApp Group Join Now
Telegram Group Join Now
Share This Article