ಬಳ್ಳಾರಿ, ಫೆಬ್ರವರಿ 22: ಬಜೆಟ್ ನಂತರ ರಾಜ್ಯ ಸರ್ಕಾರ ಕೆಎಂಎಫ್ ನಂದಿನಿಹಾಲಿನ ದರ 5 ರೂ. ಏರಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದಕ್ಕೆ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸ್ಪಷ್ಟನೆ ನೀಡಿದ್ದು, ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸರ್ಕಾರ ನಿರ್ಧಾರ ಮಾಡಿಲ್ಲ ಎಂದು ಹೇಳಿದರು.
5 ರೂ. ಹೆಚ್ಚಳ ಮಾಡಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ. ಹೆಚ್ಚಳ ಮಾಡಿದ ದರವನ್ನು ರೈತರಿಗೆ ನೀಡಬೇಕೆಂದು ಚರ್ಚಿಸಲಾಗಿದೆ. ಸಭೆಯಲ್ಲಿ ಚರ್ಚಿಸಿದ ವಿಷಯವನ್ನು ಸರ್ಕಾರಕ್ಕೆ ತಿಳಿಸಿದ್ದೇವೆ. ಪಶುಸಂಗೋಪನೆ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳಿಂದ ದರ ಹೆಚ್ಚಳದ ಬಗ್ಗೆ ಒತ್ತಡ ಇದೆ. ಆದರೆ, ಸರ್ಕಾರದಿಂದ ಯಾವುದೇ ನಿರ್ಧಾರ ಹೊರಬಂದಿಲ್ಲ. ಹಾಲಿನ ದರ ಹೆಚ್ಚಳ ಬಗ್ಗೆ ಸರ್ಕಾರ ತೀರ್ಮಾನ ಮಾಡಿಲ್ಲ ಎಂದು ತಿಳಿಸಿದರು.
ಕಳೆದ ವರ್ಷ ಡಿಸೆಂಬರ್ನಲ್ಲಿ ರೈತರು ಹಾಗೂ ಹಾಲು ಒಕ್ಕೂಟಗಳು ಪ್ರತಿ ಲೀಟರ್ ನಂದಿನಿ ಹಾಲಿನ ದರ 5 ರೂಪಾಯಿ ಏರಿಕೆ ಮಾಡುವಂತೆ ಕೆಎಂಎಫ್ಗೆ ಮನವಿ ಮಾಡಿದ್ದವು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದರು.