ಪ್ರೋತ್ಸಾಹ ಧನ ಬಾಕಿ ಮಧ್ಯೆ ಹಾಲಿನ ದರ ಏರಿಕೆಗೆ ಸರ್ಕಾರ ಚಿಂತನೆ

Ravi Talawar
ಪ್ರೋತ್ಸಾಹ ಧನ ಬಾಕಿ ಮಧ್ಯೆ ಹಾಲಿನ ದರ ಏರಿಕೆಗೆ ಸರ್ಕಾರ ಚಿಂತನೆ
WhatsApp Group Join Now
Telegram Group Join Now

ಬೆಂಗಳೂರು, ಮಾರ್ಚ್ 05: ಅಗತ್ಯ ವಸ್ತು, ಸಾಮಾಗ್ರಿಗಳ ಬೆಲೆ‌ ಏರಿಕೆ ಆಯ್ತು. ಬಸ್ ಟಿಕೆಟ್ ದರ, ಮೆಟ್ರೊ ಪ್ರಯಾಣ ದರ ದುಪ್ಪಟ್ಟು ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಲು ಮುಂದಾಗಿದೆ. ಅಧಿವೇಶನ ಮುಗಿದ ಬಳಿಕ ಹಾಲಿನ ದರ (Milk rate) ಏರಿಕೆ ಆಗಲಿದೆ ಎಂಬ ಚರ್ಚೆ ಈಗಾಗಲೇ ಎಲ್ಲೆಡೆ ಕೇಳಿ ಬರುತ್ತಿದೆ. ಇದಕ್ಕೆ ಪುಷ್ಟಿಕೊಡುವಂತೆ ವಿಧಾನ ಪರಿಷತ್​ನಲ್ಲಿಂದು ಹಾಲಿನ ದರ ಏರಿಕೆ ಬಗ್ಗೆ ಪ್ರಸ್ತಾಪವಾಗಿದೆ.

ಹಾಲು ಉತ್ಪಾದಕರಿಗೆ ಸರ್ಕಾರ 656.07 ಕೋಟಿ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿದೆ. ಇದರ ವಿಚಾರವಾಗಿ ಸದನದಲ್ಲಿ ಆಕ್ಷೇಪ ಶುವಾಯಿತು. ಕರ್ನಾಟಕದಲ್ಲಿ ಒಟ್ಟು 9,04,547 ಫಲಾನುಭವಿ ರೈತರಿಗೆ ಹಾಲು ಉತ್ಪಾದನಾ ಪ್ರೋತ್ಸಾಹ ಧನ ತಲುಪಬೇಕಿದೆ. ಕಳೆದ ಅಕ್ಟೋಬರ್ ತಿಂಗಳಿಂದ ಪ್ರೋತ್ಸಾಹ ಧನ ನೀಡದೇ ಸರ್ಕಾರ ತಡೆಹಿಡಿದಿದೆ. ಈ ಬಗ್ಗೆ ವಿಧಾನ ಪರಿಷತ್ ಕಲಾಪದಲ್ಲಿ ಪರಿಷತ್ ಸದಸ್ಯೆ ಉಮಾಶ್ರೀ ಹಾಗೂ ಎಂಜಿ ಮುಳೆ ಪ್ರಶ್ನೆ ಮಾಡಿದರು. ಈ ವೇಳೆ ಹಾಲಿನ ದರ ಏರಿಕೆಯ ಸುಳಿವನ್ನ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಪುನರುಚ್ಚರಿಸಿದ್ದಾರೆ.

WhatsApp Group Join Now
Telegram Group Join Now
Share This Article