ಅನ್ನಭಾಗ್ಯ ಅಕ್ಕಿ ಪೂರೈಕೆ; ಲಾರಿ ಮಾಲೀಕರಿಗೆ ಐದು ತಿಂಗಳಿನಿಂದ ಹಣವಿಲ್ಲ; ಸರ್ಕಾರ ಭರವಸೆ

Ravi Talawar
ಅನ್ನಭಾಗ್ಯ ಅಕ್ಕಿ ಪೂರೈಕೆ; ಲಾರಿ ಮಾಲೀಕರಿಗೆ ಐದು ತಿಂಗಳಿನಿಂದ ಹಣವಿಲ್ಲ; ಸರ್ಕಾರ ಭರವಸೆ
WhatsApp Group Join Now
Telegram Group Join Now

ಬೆಂಗಳೂರು, ಜುಲೈ 9: ಕರ್ನಾಟಕದಾದ್ಯಂತ ಅನ್ನಭಾಗ್ಯ ಅಕ್ಕಿ ಪೂರೈಕೆ ಮಾಡಿದ ಲಾರಿ ಮಾಲೀಕರಿಗೆ ಕಳೆದ ಐದು ತಿಂಗಳಿನಿಂದ ಬಿಡುಗಡೆ ಮಾಡಬೇಕಿದ್ದ 260 ಕೋಟಿ ರೂ.ನಷ್ಟು ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಲಾರಿ ಮಾಲೀಕರ ಸಂಘ ಸೋಮವಾರದಿಂದ ಮುಷ್ಕರ ಆರಂಭಿಸಿತ್ತು. ಇದರ ಬೆನ್ನಲ್ಲೇ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ, ಎರಡು ದಿನಗಳಲ್ಲಿ ಹಣ ಸಂದಾಯ ಮಾಡುತ್ತೇವೆಂದು ಭರವಸೆ ನೀಡಿದ್ದರು. ಆದರೆ ಇದರಿಂದ ತೃಪ್ತರಾಗದ ಲಾರಿ ಮಾಲೀಕರು ನಮ್ಮ ಬ್ಯಾಂಕ್ ಅಕೌಂಟ್​​ಗೆ ಹಣ ಸಂದಾಯ ಆಗುವವರೆಗೂ ಮುಷ್ಕರ ವಾಪಸ್ಸು ಪಡೆಯಲ್ಲ ಎಂದು ಪಟ್ಟು ಹಿಡಿದು ಮುಷ್ಕರ ಮುಂದುವರಿಸಿದ್ದರು.

WhatsApp Group Join Now
Telegram Group Join Now
Share This Article