ಕರ್ನಾಟಕದ ಕರಾವಳಿಯಲ್ಲಿ ಮುಂದಿನ ಐದು ದಿನಗಳ ಕಾಲ ಉಷ್ಣ ಅಲೆ

Ravi Talawar
ಕರ್ನಾಟಕದ ಕರಾವಳಿಯಲ್ಲಿ ಮುಂದಿನ ಐದು ದಿನಗಳ ಕಾಲ ಉಷ್ಣ ಅಲೆ
WhatsApp Group Join Now
Telegram Group Join Now

ಬೆಂಗಳೂರು, ಫೆಬ್ರವರಿ 27:   ಕರ್ನಾಟಕದ ಕರಾವಳಿಯಲ್ಲಿ ಮುಂದಿನ ಐದು ದಿನಗಳ ಕಾಲ ಉಷ್ಣ ಅಲೆ(Heat Wave) ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಬಿಸಿಲ ಝಳ ಹೆಚ್ಚಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ,ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೂಡ ಬಿಸಿಲು ಹೆಚ್ಚಿರಲಿದೆ.

ಚಾಮರಾಜನಗರದಲ್ಲಿ 14.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಬೆಳಗಾವಿಯಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆ ಇತ್ತು, ಬೀದರ್, ವಿಜಯಪುರ, ಗದಗ, ಹಾವೇರಿ, ರಾಯಚೂರು, ಧಾರವಾಡ, ದಕ್ಷಿಣ ಒಳನಾಡಿನ ಚಿತ್ರದುರ್ಗದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಇತ್ತು. ಕಳೆದ 24 ಗಂಟೆಗಳಲ್ಲಿ ಹೊನ್ನಾವರದಲ್ಲಿ ಗರಿಷ್ಠ ತಾಪಮಾನ -2.6 ರಷ್ಟು ಕುಸಿತವಾಗಿದೆ.

WhatsApp Group Join Now
Telegram Group Join Now
Share This Article