ರಾಮನಗರ (ಮಾ.25): ಬಿಡದಿಯ ಕೇತಗಾನಹಳ್ಳಿ ಬಳಿ ಮಾಜಿ ಸಿಎಂ ಹಾಗೂ ಸಚಿವ ಹೆಚ್ ಡಿ ಕುಮಾರಸ್ವಾಮಿ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನುವ ಆರೋಪವಿದೆ. ಹೆಚ್ಡಿಕೆ ತೋಟದಲ್ಲಿ ಒತ್ತುವರಿ ತೆರವು ಕಾರ್ಯ ಕೂಡ ನಡೆಯುತ್ತಿತ್ತು. ತೆರವಿನ ವಿರುದ್ಧ ಕುಮಾರಸ್ವಾಮಿ ಹೈಕೋರ್ಟ್ ಮೆಟ್ಟಿಲೇರಿ ಸ್ಟೇ ತಂದಿದ್ದಾರೆ. ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಬಲವಂತದ ಕ್ರಮಕ್ಕೆ ಮುಂದಾಗಬಾರದುಈ ಸಂಬಂಧ ಎಚ್.ಡಿ.ಕುಮಾರಸ್ವಾಮಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎನ್.ಎಸ್.ಸಂಜಯಗೌಡ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ರಾಮನಗರ ತಹಶೀಲ್ದಾರ್ ಅವರು ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು ಎಂದು ಹೈಕೋರ್ಟ್ ಆದೇಶ ನೀಡಿದೆ.
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಭೂ ಒತ್ತುವರಿ ವಿಚಾರವಾಗಿ ರಾಮನಗರ ತಹಶೀಲ್ದಾರ್ ಅವರು ಒತ್ತುವರಿ ತೆರವಿಗೆ ನೋಟಿಸ್ ನೀಡಿದ್ದರು. ಇದೀಗ ಹೈಕೋರ್ಟ್ ತೆರವಿಗೆ ತಡೆ ನೀಡಿದೆ. ಬಿಡದಿಯ ಕೇತಗಾನಹಳ್ಳಿ ತೋಟದ ಜಾಗದಲ್ಲಿ ಗೋಮಾಳ ಒತ್ತುವರಿ ಆರೋಪವಿದ್ದು, ಇದರಿಂದ ಹೆಚ್.ಡಿ.ಕುಮಾರಸ್ವಾಮಿ ಅವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ದಾಖಲೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಮನವಿ ಮಾಡಿದರು.