ಕಪ್ಪತ್ತಗುಡ್ಡ ಸುತ್ತ ಗಣಿಗಾರಿಕೆ ಚಟುವಟಿಕೆ ನಿಷೇಧಿಸಿದ್ದ ರಾಜ್ಯ ಸರ್ಕಾರದ ಕ್ರಮ ಎತ್ತಿಹಿಡಿದ ಹೈಕೋರ್ಟ್‌

Ravi Talawar
ಕಪ್ಪತ್ತಗುಡ್ಡ ಸುತ್ತ ಗಣಿಗಾರಿಕೆ ಚಟುವಟಿಕೆ ನಿಷೇಧಿಸಿದ್ದ ರಾಜ್ಯ ಸರ್ಕಾರದ ಕ್ರಮ ಎತ್ತಿಹಿಡಿದ ಹೈಕೋರ್ಟ್‌
WhatsApp Group Join Now
Telegram Group Join Now

ಬೆಂಗಳೂರು: ಗದಗ ಜಿಲ್ಲೆಯ ಕಪ್ಪತ್ತಗುಡ್ಡ ವನ್ಯಜೀವಿ ಧಾಮದ ಅಂಚಿನಿಂದ ಒಂದು ಕಿಲೋ ಮೀಟರ್‌ ವ್ಯಾಪ್ತಿಯಲ್ಲಿನ ಕಲ್ಲು, ಮರಳು ಗಣಿಗಾರಿಕೆ ಚಟುವಟಿಕೆಗಳನ್ನು ನಿಷೇಧಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ.

ಗದಗ ಜಿಲ್ಲಾ ಟಾಸ್ಕ್‌ ಫೋರ್ಸ್‌ ಸಮಿತಿಯ ಆದೇಶವನ್ನು ಪ್ರಶ್ನಿಸಿ ಬ್ಯಾಡಗಿ ತಾಲ್ಲೂಕು ಮೋಟೆಬೆನ್ನೂರು ಗ್ರಾಮದ ಎಸ್ ಆರ್‌ ಬಳ್ಳಾರಿ ಹಾಗೂ ಕೆಲವು ಗಣಿಗಾರಿಕಾ ಕಂಪೆನಿಗಳೂ ಸೇರಿದಂತೆ ಸಲ್ಲಿಕೆಯಾಗಿದ್ದ ಒಟ್ಟು ಒಂಬತ್ತು ಅರ್ಜಿಗಳನ್ನು ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್‌ ಅವರ ನೇತೃತ್ವದ ವಿಭಾಗೀಯ ಪೀಠವು ಅರ್ಜಿಗಳನ್ನು ವಜಾಗೊಳಿಸಿದೆ.

ಕಪ್ಪತಗುಡ್ಡ ಮೀಸಲು ಅರಣ್ಯವನ್ನು ವನ್ಯಜೀವಿ ಧಾಮ ಎಂದು ಅಧಿಸೂಚನೆ ಹೊರಡಿಸಲಾಗಿದೆ. ಹೀಗಾಗಿ, ಈ ಅರಣ್ಯ ಪ್ರದೇಶದ ಸುತ್ತಲಿನ ಒಂದು ಕಿ ಮೀ ಪ್ರದೇಶವು ನಿಷೇಧಿತ ವಲಯವಾಗುತ್ತದೆ. ಪರಿಸರ ಸೂಕ್ಷ್ಮ ವಲಯದ ಅಧಿಸೂಚನೆ ಇಲ್ಲದೇ ಹೋದರೂ ಸಂರಕ್ಷಿತ ಪ್ರದೇಶದ ಅಂಚಿನಿಂದ ಒಂದು ಕಿ ಮೀ ವ್ಯಾಪ್ತಿಯ ಸ್ಥಳವನ್ನು ಸಂರಕ್ಷಿಸಬೇಕಾಗುತ್ತದೆ. ಆದ್ದರಿಂದ, ಕಪ್ಪತ್ತಗುಡ್ಡ ವನ್ಯಜೀವಿ ಧಾಮದ ಅಂಚಿನಿಂದ ಒಂದು ಕಿ ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ಚಟುವಟಿಕೆಗಳಿಗೆ ಅನುಮತಿ ನೀಡಲು ಆಗದು” ಎಂದು ಪೀಠ ತೀರ್ಪಿನಲ್ಲಿ ತಿಳಿಸಿದೆ. ರಾಜ್ಯ ಸರ್ಕಾರದ ಪರ ಎಸ್ ಎಸ್ ಮಹೇಂದ್ರ ವಾದ ಮಂಡಿಸಿದ್ದರು.

WhatsApp Group Join Now
Telegram Group Join Now
Share This Article