ರಿಲಯನ್ಸ್ ಎಂಟರ್ಟೈನ್ಮೆಂಟ್ ಮೂಲಕ  ದ ಜಡ್ಜ್ ಮೆಂಟ್ ಚಿತ್ರ ಬಿಡುಗಡೆ 

Ravi Talawar
ರಿಲಯನ್ಸ್ ಎಂಟರ್ಟೈನ್ಮೆಂಟ್ ಮೂಲಕ  ದ ಜಡ್ಜ್ ಮೆಂಟ್ ಚಿತ್ರ ಬಿಡುಗಡೆ 
WhatsApp Group Join Now
Telegram Group Join Now
      ಕ್ರೇಜಿಸ್ಟಾರ್ ವಿ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ, ಅದ್ದೂರಿ ತಾರಾಬಳಗ ಹೊಂದಿರುವ ‘ದ ಜಡ್ಜ್ ಮೆಂಟ್’ ಚಿತ್ರದ ವಿತರಣೆ ಹಕ್ಕನ್ನು ಭಾರತದ ಹೆಸರಾಂತ ರಿಲಯನ್ಸ್ ಎಂಟರ್ಟೈನ್ಮೆಂಟ್ ಸಂಸ್ಥೆ ಪಡೆದುಕೊಂಡಿದೆ. ಚಿತ್ರದ ಟೀಸರ್ ಸಹ ಬಿಡುಗಡೆಯಾಗಿದ್ದು ಕುತೂಹಲ ಮೂಡಿಸಿದೆ.
     ‘ಇತ್ತೀಚಿಗೆ ಡಾ. ರಾಜಕುಮಾರ್ ಅವರ ಹುಟ್ಟುಹಬ್ಬದ ದಿನದಂದು ನಮ್ಮ ಚಿತ್ರದ ಚಿತ್ರೀಕರಣ ಮುಕ್ತಾಯ ಮಾಡಿ ಕುಂಬಳಕಾಯಿ ಒಡೆಯಲಾಯಿತು. ಟೀಸರ್ ಸಹ ಬಿಡುಗಡೆಯಾಗಿದ್ದು, ಪ್ರಶಂಸೆಯ ಮಾತುಗಳು ಕೇಳಿ ಬರುತ್ತದೆ. ಮತ್ತೊಂದು ಖುಷಿಯ ವಿಚಾರವೆಂದರೆ ನಮ್ಮ ಚಿತ್ರದ ವಿತರಣೆ ಹಕ್ಕನ್ನು ಪಡೆದುಕೊಂಡಿರುವ ಪ್ರತಿಷ್ಠಿತ ರಿಲಯನ್ಸ್ ಎಂಟರ್ಟೈನ್ಮೆಂಟ್ ಸಂಸ್ಥೆ, ಮುಂದೆ ನಮ್ಮ ಸಂಸ್ಥೆಯ ಚಿತ್ರಗಳ ನಿರ್ಮಾಣದಲ್ಲೂ ಸಹಯೋಗ ನೀಡುವುದಾಗಿ ತಿಳಿಸಿದೆ.  ಕೋರ್ಟ್ ಡ್ರಾಮ ಜಾನರ್ ನ ಈ ಚಿತ್ರವನ್ನು ಸದ್ಯದಲ್ಲೇ ತೆರೆಗೆ ತರಲಾಗುವುದು” ಎಂದು ನಿರ್ಮಾಪಕ ಹಾಗೂ ನಿರ್ದೇಶಕ ಗುರುರಾಜ ಕುಲಕರ್ಣಿ  ತಿಳಿಸಿದ್ದಾರೆ.
     ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಹಾಗೂ ಕೆಂಪರಾಜ್ ಸಂಕಲನ ಚಿತ್ರಕ್ಕಿದೆ.   ದಿಗಂತ್ , ಧನ್ಯ ರಾಮಕುಮಾರ್, ಮೇಘನಾ ಗಾಂವ್ಕರ್, ಲಕ್ಷ್ಮೀ ಗೋಪಾಲಸ್ವಾಮಿ, ನಾಗಾಭರಣ, ಪ್ರಕಾಶ್ ಬೆಳವಾಡಿ, ರಂಗಾಯಣ ರಘು, ರವಿಶಂಕರ್ ಗೌಡ, ಸುಜಯ್ ಶಾಸ್ತ್ರಿ ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಿಗಿ, ನವಿಲ ಮುಂತಾದವರ ತಾರಾಬಳಗವಿದೆ.
WhatsApp Group Join Now
Telegram Group Join Now
Share This Article