ಕೊನೆಯುಸರೆಳೆದ ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ

Ravi Talawar
ಕೊನೆಯುಸರೆಳೆದ ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ
WhatsApp Group Join Now
Telegram Group Join Now

ದೇಶದ ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ ಅವರು ಕೊನೆಯುಸರೆಳೆದಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಅವರು 1975 ಮತ್ತು 1998 ರ ಪರಮಾಣು ಪರೀಕ್ಷೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಣುಶಕ್ತಿ ಇಲಾಖೆಯ ಅಧಿಕಾರಿಯೊಬ್ಬರು ಈ ಕುರಿತು ಮಾಹಿತಿ ನೀಡಿದ್ದಾರೆ.

ಪರಮಾಣು ಶಸ್ತ್ರಾಸ್ತ್ರಗಳ ಕಾರ್ಯಕ್ರಮದೊಂದಿಗೆ ಸಂಬಂಧ ಹೊಂದಿದ್ದ ಚಿದಂಬರಂ ಅವರು ಮುಂಬೈನ ಜಸ್ಲೋಕ್ ಆಸ್ಪತ್ರೆಯಲ್ಲಿ ಶನಿವಾರ ಮುಂಜಾನೆ 3.20 ಕ್ಕೆ ಕೊನೆಯುಸಿರೆಳೆದರು ಎಂದು ಅಧಿಕಾರಿ ತಿಳಿಸಿದ್ದಾರೆ. ಅವರು ಪರಮಾಣು ಶಕ್ತಿ ಆಯೋಗದ ಅಧ್ಯಕ್ಷರಾಗಿ ಮತ್ತು ಭಾರತ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು. ಚಿದಂಬರಂ ಅವರಿಗೆ 1975 ಮತ್ತು 1999 ರಲ್ಲಿ ಪದ್ಮಶ್ರೀ ಮತ್ತು ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.

 ಕಳೆದ ಕೆಲವು ದಿನಗಳಿಂದ ಅವರ ಆರೋಗ್ಯ ಸರಿ ಇರಲಿಲ್ಲ. ವಿಜ್ಞಾನಿಯಾಗಿ ತಮ್ಮ ವೃತ್ತಿ ಜೀವನದಲ್ಲಿ, ಡಾ. ಚಿದಂಬರಂ ಅವರು ಬಾಬಾ ಪರಮಾಣು ಸಂಶೋಧನಾ ಕೇಂದ್ರದ (BARC) ನಿರ್ದೇಶಕರಾಗಿ, ಪರಮಾಣು ಶಕ್ತಿ ಆಯೋಗದ (AEC) ಅಧ್ಯಕ್ಷರಾಗಿ ಮತ್ತು ಪರಮಾಣು ಶಕ್ತಿ ಇಲಾಖೆ (DAE) ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. ಅವರು 1994-95ರ ಅವಧಿಯಲ್ಲಿ ಇಂಟರ್ನ್ಯಾಷನಲ್ ಅಟಾಮಿಕ್ ಎನರ್ಜಿ ಏಜೆನ್ಸಿಯ (IAEA) ಆಡಳಿತ ಮಂಡಳಿಯ ಅಧ್ಯಕ್ಷರಾಗಿದ್ದರು.

WhatsApp Group Join Now
Telegram Group Join Now
Share This Article