ಎಸ್. ಎಂ. ಕೃಷ್ಣ ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ

Ravi Talawar
ಎಸ್. ಎಂ. ಕೃಷ್ಣ ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ
WhatsApp Group Join Now
Telegram Group Join Now

ಬೆಂಗಳೂರು: ಅಗಲಿದ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರ ಮೃತದೇಹದ ಅಂತಿಮ ವಿಧಿ ವಿಧಾನ ಇಂದು ಅವರ ಹುಟ್ಟೂರು ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ಬೆಂಗಳೂರಿನ ಸದಾಶಿವನಗರದಿಂದ ಹೊರಟಿರುವ ಕೃಷ್ಣ ಅವರ ಪಾರ್ಥಿವ ಶರೀರ ಕೆಂಗೇರಿ ಮಾರ್ಗವಾಗಿ ಮದ್ದೂರು ತಲುಪಲಿದೆ. ಮಾರ್ಗಮಧ್ಯೆ ಕೆಂಗೇರಿ, ಬಿಡದಿ, ರಾಮನಗರ, ಚನ್ನಪಟ್ಟಣದಲ್ಲಿ ಕೆಲಕಾಲ ಮೃತದೇಹದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಮಧ್ಯಾಹ್ನ 3 ಗಂಟೆಗೆ ಎಸ್. ಎಂ. ಕೃಷ್ಣ ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ. ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ.

“ಮಂಡ್ಯ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ಕೆಲವರು ಒತ್ತಾಯಿಸಿದ್ದರು. ಆದರೆ ಆ ರೀತಿ ಮಾಡಲು ಸಾಧ್ಯವಾಗುವುದಿಲ್ಲ, ದಯವಿಟ್ಟು ಸಹಕರಿಸಬೇಕು. ಮಧ್ಯಾಹ್ನ ಮೂರು ಗಂಟೆಗೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ” ಎಂದು‌ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article