ಮೈಸೂರು: ರಗೂರು ತಾಲೂಕಿನ ಹಾಲುಗಡ ಗಣೇಶನ ಗುಡಿ ಬಳಿ ನಡೆದಿದೆ. ಸರಗೂರು ತಾಲೂಕಿನ ಬಲದಂಡೆ ನಾಲೆ ಸೇತುವೆ ಕುಸಿದು ಬಿದ್ದಿದ್ದು, ಶ್ರೀ ಚಿಕ್ಕದೇವಮ್ಮನ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ಹಾಗೂ ವಿವಿಧ ಗ್ರಾಮಗಳಿಗೆ ತೆರಳುವ ರಸ್ತೆಯಲ್ಲಿರುವ ಸೇತುವೆ ಇದಾಗಿದೆ.
ಇಟ್ನ ಗ್ರಾಮದಿಂದ ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ (ಟಿಎನ್.52, 8333) ಲಾರಿ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸೇತುವೆ ದುರಸ್ತಿಪಡಿಸುವಂತೆ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ದೂರಿದರು.