ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸಿಗೆ, ದಿಂಬು ಎಸ್ ಐಟಿ ವಶಕ್ಕೆ

Ravi Talawar
ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸಿಗೆ, ದಿಂಬು ಎಸ್ ಐಟಿ ವಶಕ್ಕೆ
WhatsApp Group Join Now
Telegram Group Join Now

ಹಾಸನ,29: ನೂರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪಕ್ಕೆ ಸಿಲುಕಿರುವ ಪ್ರಜ್ವಲ್ ರೇವಣ್ಣ ವಿದೇಶದಿಂದ ಬೆಂಗಳೂರಿಗೆ ಮರಳುವ ದಿನಾಂಕ ಸಮೀಪಿಸುತ್ತಿದ್ದಂತೆಯೇ ಎಸ್ ಐಟಿ ತನಿಖೆಯನ್ನು ಚುರುಕುಗೊಳಿಸಿದ್ದು, ಹಾಸನದಲ್ಲಿ ಸಾಕ್ಷ್ಯ ಸಂಗ್ರಹವನ್ನು ತೀವ್ರಗೊಳಿಸಿದೆ.

ಹಾಸನದ ಅಮಾನತುಗೊಂಡಿರುವ ಜೆಡಿಎಸ್ ಸಂಸದರ ನಿವಾಸದಲ್ಲಿ ಮಂಗಳವಾರ ಮಧ್ಯಾಹ್ನ ಎಸ್ ಐಟಿ ಹಾಗೂ ಎಫ್ ಎಸ್ ಎಲ್ ತಂಡ ಆರಂಭಿಸಿದ್ದ ಪರಿಶೀಲನೆ, ಸಾಕ್ಷ್ಯ ಸಂಗ್ರಹ ಬುಧವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಮುಕ್ತಾಯವಾಗಿದೆ. ಸತತ ಹತ್ತು ಗಂಟೆಗಳ ಕಾಲ ಪರಿಶೀಲನೆ ನಡೆಸಿದೆ.

ಪ್ರಜ್ವಲ್ ರೇವಣ್ಣ ವಿಚಾರಣೆ ವೇಳೆ ಮಹತ್ವದ ದಾಖಲೆ ಸಂಗ್ರಹಿಸಲು ಮುಂದಾಗಿರುವ ಎಸ್ ಐಟಿ, ಹಾಸನದ ಆರ್ ಸಿ ರಸ್ತೆಯಲ್ಲಿರುವ ಸಂಸದರ ನಿವಾಸದಲ್ಲಿ ಅವರ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು, ಹೊದಿಕೆ ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆದು ಬೆಂಗಳೂರಿಗೆ ತೆರಳಿದೆ.

WhatsApp Group Join Now
Telegram Group Join Now
Share This Article