ಡಾರ್ಜಿಲಿಂಗ್, ಅಕ್ಟೋಬರ್ 6: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ನಲ್ಲಿ ಭೂಕುಸಿತ ಉಂಟಾಗಿದೆ. ಕೇವಲ 12 ಗಂಟೆಗಳಲ್ಲಿ 300 ಮಿ.ಮೀ.ಗೂ ಹೆಚ್ಚು ಮಳೆಯಿಂದ ಉಂಟಾದ ಕಾರಣದಿಂದ ಭೂಕುಸಿತ ಉಂಟಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಇಂದು ಕೂಡ ಸಂಭವಿಸಿದ ಭೂಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ 24ಕ್ಕೆ ಏರಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಹಲವಾರು ಜನರು ಇನ್ನೂ ಕಾಣೆಯಾಗಿದ್ದಾರೆ ಮತ್ತು ಸಾವಿರಾರು ಪ್ರವಾಸಿಗರು ಬೆಟ್ಟಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.