3ನೇ ಬಾರಿಗೆ ಚಾಂಫಿಯನ್ಸ್ ಟ್ರೋಫಿ ಗೆದ್ದ ಏಕೈಕ ತಂಡ ಭಾರತ: ದೇಶಾದ್ಯಂತ ಸಂಭ್ರಮಾಚರಣೆ

Ravi Talawar
3ನೇ ಬಾರಿಗೆ ಚಾಂಫಿಯನ್ಸ್ ಟ್ರೋಫಿ ಗೆದ್ದ ಏಕೈಕ ತಂಡ ಭಾರತ: ದೇಶಾದ್ಯಂತ ಸಂಭ್ರಮಾಚರಣೆ
WhatsApp Group Join Now
Telegram Group Join Now

ನವದೆಹಲಿ: ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ICC ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಕೀವಿಸ್ ತಂಡವನ್ನು 4 ವಿಕೆಟ್​ಗಳಿಂದ ಮಣಿಸಿ ಭಾರತ ಟ್ರೋಫಿ ಗೆಲ್ಲುತ್ತಿದ್ದಂತೆಯೇ ದೇಶಾದ್ಯಂತ ಸಂಭ್ರಮಾಚರಣೆಯ ಕಟ್ಟೆಯೊಡೆಯಿತು.

ರಾಷ್ಟ್ರ ರಾಜಧಾನಿ ನವದೆಹಲಿ, ಮುಂಬೈ, ಬೆಂಗಳೂರು, ಕೋಲ್ಕತ್ತಾ ಸೇರಿದಂತೆ ರಾಷ್ಟ್ರದ ವಿವಿಧ ಭಾಗಗಳಲ್ಲಿ ಕ್ರಿಕೆಟ್ ಅಭಿಮಾನಿಗಳು ತ್ರಿವರ್ಣ ಧ್ವಜ ಹಿಡಿದು ರಸ್ತೆಗಿಳಿದು, ಟೀಂ ಇಂಡಿಯಾ ಪರ ಘೋಷಣೆ ಕೂಗುವ ಮೂಲಕ ಸಂಭ್ರಮಿಸಿದ್ದಾರೆ. ಹರ್ಷೋದ್ಗಾರಗಳೊಂದಿಗೆ ಪಟಾಕಿ ಸಿಡಿಸಿ, ಕುಣಿದು ಕುಪ್ಪಳಿಸಿದ್ದಾರೆ. ಕೆಲವೆಡೆ ಸಿಹಿ ಹಂಚಿ ಸಂಭ್ರಮಪಟ್ಟಿದ್ದಾರೆ.

ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ನೀಡಿದ್ದ 252 ರನ್ ಗಳ ಸವಾಲಿನ ಗುರಿ ಬೆನ್ನು ಹತ್ತಿದ ಭಾರತ ತಂಡ 49 ಓವರ್ ನಲ್ಲೇ 6 ವಿಕೆಟ್ ಕಳೆದುಕೊಂಡು 254 ರನ್ ಗಳಿಸಿ 4 ವಿಕೆಟ್ ಗಳ ಅಂತರದಲ್ಲಿ ಗೆದ್ದು ಬೀಗಿತು. ಆ ಮೂಲಕ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಗೆ ಮುತ್ತಿಟ್ಟಿತು.

WhatsApp Group Join Now
Telegram Group Join Now
Share This Article