ವ್ಯಕ್ತಿ ಕಾಣೆ; ಪತ್ತೆಗೆ ಮನವಿ

Ravi Talawar
ವ್ಯಕ್ತಿ ಕಾಣೆ; ಪತ್ತೆಗೆ ಮನವಿ
WhatsApp Group Join Now
Telegram Group Join Now


ಬಳ್ಳಾರಿ,ಜೂ.11: ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರ್.ಕುಬೇರ ಎನ್ನುವ 32 ವರ್ಷದ ವ್ಯಕ್ತಿಯು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.

ಚಹರೆ: ಅಂದಾಜು 5.5 ಅಡಿ ಎತ್ತರ, ದುಂಡು ಮುಖ, ಕಪ್ಪು ಮೈಬಣ್ಣ ಹೊಂದಿದ್ದು, ಬಲಗೈಗೆ ಅಪ್ಪು ಎಂದು ಹಚ್ಚೆ  ಹಾಕಿಸಿಕೊಂಡಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ತುಂಬುತೋಳಿನ ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಮತ್ತು ಹಿಂದಿ ಭಾಷೆ ಮಾತನಾಡುತ್ತಾನೆ.

ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಗಾಂಧಿನಗರ ಪೊಲೀಸ್ ಠಾಣೆಯ ದೂ.08392-272192, ಪಿಎಸ್‌ಐ ಮೊ.94808203082, ಪಿಐ ಮೊ.9480803046 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article