ಯರಗಟ್ಟಿ: ಗ್ರಾಮದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಿದ್ದು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಮೂಲಕ ಕೂಡಲೇ ನೀಗಿಸುವಂತೆ ಆರ್ ಡಬ್ಲ್ಯೂ ಎಸ್ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಾಡಮಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುಬಗಟ್ಟಿ ಗ್ರಾಮಸ್ಥರು ಶುಕ್ರವಾರ ಕುಡಿಯುವ ನೀರು ಪೂರೈಕೆ ಮಾಡುವಂತೆ ಗ್ರಾಮ ಪಂಚಾಯಿತಿ ಎದುರು ಧರಣಿ ನಡೆಸುತ್ತಿದ್ದರೂ ಧರಣಿಗೆ ಎಚ್ಚೆತ್ತ ಅಧಿಕಾರಿಗಳು ಕುರುಬಗಟ್ಟಿ ಗ್ರಾಮದಲ್ಲಿ ಪೈಪ್ ಲೈನ್ ಕಾಮಗಾರಿ ಭರದಿಂದ ಸಾಗಿದೆ ಸೋಮವಾರ ಕಾಮಗಾರಿ ಪೂರ್ಣಗೊಂಡು ಮನೆ ಮನೆ ಕುಡಿಯುವ ನೀರು ಪೂರೈಕೆ ಮಾಡಲಾಗುವುದು ಎಂದು ಗ್ರಾ. ಪಂ. ಅಧ್ಯಕ್ಷ ಲಕ್ಕಪ್ಪ ಸನ್ನಿಂಗವನ್ನರ ತಿಳಿಸಿದರು.
ಈ ಮಾತನಾಡಿದ ಗ್ರಾಮಸ್ಥರು ನಮ್ಮ ಧರಣಿಗೆ ಸ್ಪಂದಿಸಿದ ಮೇಲಾಧಿಕಾರಿಗಳು ಕಾಮಗಾರಿ ಪ್ರಾರಂಭಿಸಿದ್ದಕ್ಕೆ ಹಾಗೂ ಮಾಧ್ಯಮ ಮಿತ್ರರಿಗೆ ಗ್ರಾಮಸ್ಥರಿಂದ ಅಭಿನಂದನೆ ಸಲ್ಲಿಸಿದರು.