ಗುರ್ಲಾಪೂರ : ನ್ಯಾಯಯುತ ಬೆಲೆ ನಿಗದಿ ಮತ್ತು ಬಾಕಿ ಹಣ ಪಾವತಿಗೆ ಒತ್ತಾಯಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ 8ನೇ ದಿನದ ಪ್ರತಿಭಟನೆ ಮಹತ್ವದ ತಿರುವು ಪಡೆದುಕೊಂಡಿದ್ದು, ಸಹಕಾರ ಸಂಘಗಳ ಒಕ್ಕೂಟ ಹಾಗೂ ವ್ಯಾಪಾರಸ್ಥರ ಒಕ್ಕೂಟದಿಂದ ಮೂಡಲಗಿ ಪಟ್ಟಣ ಸಂಪೂರ್ಣ ಬಂದ್ ಮಾಡಲಾಗಿದ್ದು, ಇಂದು ಗುರುವಾರ ಕೂಡ ಗುರ್ಲಾಪೂರ ಕ್ರಾಸ್ ದಲ್ಲಿ ತೀವ್ರ ಪ್ರತಿಭಟನೆ ಮುಂದುವರಿದಿದೆ.
ಹಲವು ಸಂಘಟನೆಗಳ ಬೆಂಬಲದೊಂದಿಗೆ ಪಟ್ಟಣದ ಸಾರ್ವಜನಿಕರು ಮೂಡಲಗಿ ಬಂದ್‌ಗೆ ಕರೆ ನೀಡಿದ್ದು, ಗುರ್ಲಾಪುರ, ಜಂಬೋಟಿ ಮತ್ತು ಗೋಕಾಕ್‌ಗೆ ವ್ಯಾಪಿಸಿ, ಸಾಮಾನ್ಯ ಜನಜೀವನ ಸ್ಥಗಿತಗೊಂಡಿದೆ. ಅಂಗಡಿಗಳು ಮತ್ತು ವ್ಯವಹಾರಗಳು ಸ್ವಯಂಪ್ರೇರಣೆಯಿಂದ ಮುಚ್ಚಲ್ಪಟ್ಟಿದ್ದರೆ.
ಪ್ರತಿಭಟನಾಕಾರರು ಪಟ್ಟಣದ ಕಲ್ಮೇಶ್ವರ ವೃತ್ತದಿಂದ ಗುರ್ಲಾಪೂರ ಕ್ರಾಸ್ ವರೆಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರ ಅನುಕು ಶವದೊಂದಿಗೆ ಮೂರು ಕಿಲೋ ಮೀಟರ್ ಬೃಹತ್ ಪಾದಯಾತ್ರೆ ಮೂಲಕ ಆಗಮಿಸಿ ರೈತರ ಹೋರಾಟಕ್ಕೆ ಬೆಂಬಲ ನೀಡಿದರು.
ಪಟ್ಟಣ ಬಂದಗೆ ವಿದ್ಯಾರ್ಥಿಗಳು ಸಾಥ್ : ಪಟ್ಟಣದ ಅನೇಕ ಕಾಲೇಜು ವಿದ್ಯಾರ್ಥಿಗಳು ಕಲ್ಮೇಶ್ವರ ವೃತ್ತಕ್ಕೆ ಆಗಮಿಸಿ, ವೃತ್ತದಲ್ಲಿ ಪ್ರತಿಭಟಿಸಿ ರೈತರ ಹೋರಾಟಕ್ಕೆ ಬೆಂಬಲ ನೀಡಿದರು.


