ನವದೆಹಲಿ, ಸೆಪ್ಟೆಂಬರ್ 20: ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರು ಪ್ರಕರಣವೊಂದರ ವಿಚಾರಣೆ ವೇಳೆ ಬೆಂಗಳೂರಿನ ನಿರ್ದಿಷ್ಟ ಪ್ರದೇಶವನ್ನು ‘ಪಾಕಿಸ್ತಾನ’ಕ್ಕೆ ಹೋಲಿಸಿದ್ದಾರೆ ಎಂಬ ಆರೋಪದ ಸಂಬಂಧ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿದೆ. ಸುಪ್ರೀಂ ಕೋರ್ಟ್ ನ್ಯಾಯಪೀಠ ಸದ್ಯ ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್ರಿಂದ ವರದಿ ಕೇಳಿದೆ. ಜತೆಗೆ, ಅಟಾರ್ನಿ ಜನರಲ್ ಹಾಗೂ ಸಾಲಿಸಿಟರ್ ಜನರಲ್ ಅಭಿಪ್ರಾಯ ಕೇಳಿದೆ.
ಹೈಕೋರ್ಟ್ ನ್ಯಾಯಾಧೀಶ ವಿರುದ್ಧ ಬೆಂಗಳೂರಿನ ನಿರ್ದಿಷ್ಟ ಪ್ರದೇಶವನ್ನು ‘ಪಾಕಿಸ್ತಾನ’ಕ್ಕೆ ಹೋಲಿಸಿದ ಆರೋಪ; ವರದಿ ಕೇಳಿದ ಸುಪ್ರೀಂ
ಕರ್ನಾಟಕ ಹೈಕೋರ್ಟ್ ನ್ಯಾಯಶಧೀಶರ ಹೇಳಿಕೆ ಕುರಿತ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸದ್ಯ ಎರಡು ವಾರ ಕಾಲ ಮುಂದೂಡಿಕೆ ಮಾಡಿದೆ. ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ ವಿ ಶ್ರೀಶಾನಂದ ಅವರು ವಿಚಾರಣೆಯೊಂದರ ವೇಳೆ ‘ಪಾಕಿಸ್ತಾನ’ ಹೋಲಿಕೆ ಹೇಳಿಕೆ ನೀಡಿದ್ದರು ಎಂಬ ಆರೋಪವಿದೆ. ಹೇಳಿಕೆ ಕುರಿತ ವಿಡಿಯೋ ತುಣುಕೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.