ದೆಹಲಿ, ಅಕ್ಟೋಬರ್ 29: ವಿಜಯಪುರ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಸಲ್ಲಿಸಿದ್ದ ಮೇಲ್ಮನವಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಸ್ವಾಮೀಜಿ ಈ ರೀತಿಯ ಕೀಳುಮಟ್ಟದ ಹೇಳಿಕೆ ನೀಡಿದ್ದು ಸರಿಯಲ್ಲ ಎಂದು ನ್ಯಾ.ಪಂಕಜ್ ಮಿತ್ತಲ್ ಹಾಗೂ ಪ್ರಸನ್ನ ವರಾಲೆ ಪೀಠ ತರಾಟೆಗೆ ತೆಗದುಕೊಂಡಿದೆ. ಅಲ್ಲದೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನೇರಿಶ್ರೀಗಳ ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
ವಿಜಯಪುರಕ್ಕೆ ನಿರ್ಬಂಧ ಪ್ರಶ್ನಿಸಿದ್ದ ಕನ್ನೇರಿ ಶ್ರೀ ಮೇಲ್ಮನವಿ ವಜಾಗೊಳಿಸಿದ ಸುಪ್ರೀಮ್

ಹೈಕೋರ್ಟ್ ಹೇಳಿರುವುದರಲ್ಲಿ ತಪ್ಪೇನಿದೆ ಎಂದು ನ್ಯಾಯಪೀಠ ಪ್ರಶ್ನಿಸಿದ್ದು, ನೀವು ಸ್ವಾಮೀಜಿಯಾಗಿ ಗಂಭೀರವಾಗಿರಬೇಕು. ಅವಹೇಳನಕಾರಿ ಭಾಷೆ ಬಳಸಿದ್ದೀರಿ, ಇದು ವಾಕ್ ಸ್ವಾತಂತ್ರ್ಯ ವ್ಯಾಪ್ತಿಯಲ್ಲಿಲ್ಲ. ನೀವು ಮಾತನಾಡುವುದು ನಿಲ್ಲಿಸಿ, ಮೌನವಾಗಿ ಬೇರೆ ಮಠದಲ್ಲಿ ಧ್ಯಾನ ಮಾಡಿ ಎಂದು ಮಹಾರಾಷ್ಟ್ರದ ಕನ್ನೇರಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳಿಗೆ ಸುಪ್ರೀಂಕೋರ್ಟ್ ಸಲಹೆ ನೀಡಿದೆ.

