ಮದ್ದೂರು, ಸೆಪ್ಟೆಂಬರ್ 29: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟ ಪೂರ್ವ ಯೋಜಿತವಾಗಿತ್ತೆಂಬುದು ಪೊಲೀಸರು ನಡೆಸಿದ ತನಿಖೆಯಲ್ಲಿ ಬಟಾಬಯಲಾಗಿದೆ. ಇದರೊಂದಿಗೆ, ಘಟನೆಗೆ ಟ್ವಿಸ್ಟ್ ದೊರೆತಂತಾಗಿದೆ. ಘಟನೆ ಸಂಬಂಧ ಪೊಲೀಸರು ಆರಂಭದಲ್ಲಿ 22 ಮಂದಿ ಆರೋಪಿಗಳನ್ನು ಗುರುತಿಸಿದ್ದರು. ನಂತರ 29 ಮಂದಿಯನ್ನು ಗುರುತಿಸಿ ವಶಕ್ಕೆ ಪಡೆದಿದ್ದರು. ಇದೀಗ ಆರೋಪಿಗಳ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಸದ್ಯ ಎಲ್ಲ 32 ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
ಕಲ್ಲು ತೂರಾಟ ಪೂರ್ವ ಯೋಜಿತ; ಮದ್ದೂರು ಘಟನೆಯ ಸತ್ಯ ಬಹಿರಂಗ

ತನಿಖೆಯ ವೇಳೆ ಆರೋಪಿಗಳು ಬಾಯಿ ಬಿಟ್ಟಿದ್ದು, ಸ್ವಾಮಿ ಎಂಬುವವರ ನೇತೃತ್ವದಲ್ಲಿ ಕೂರಿಸಿದ್ದ ಗಣೇಶ ಮೂರ್ತಿ ಮೇಲೆ ಕಲ್ಲು ತೂರಲು ಪೂರ್ವಯೋಜನೆ ಮಾಡಲಾಗಿತ್ತು ಎಂದು ಒಪ್ಪಿಕೊಂಡಿದ್ದಾರೆ. ಆದರೆ ಟಾರ್ಗೆಟ್ ಮಾಡಿದ್ದ ಗಣೇಶ ಮೆರವಣಿಗೆಯ ಬದಲು ಬೇರೆ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆದಿರುವುದು ಪತ್ತೆಯಾಗಿದೆ.

