ಬಳ್ಳಾರಿ,ಜು.10 ಕುರುಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹನುಮಂತಮ್ಮ ಎನ್ನುವ 46 ವರ್ಷದ ಮಹಿಳೆಯು ಮಾರ್ಚ್ 20 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಚಹರೆ ಗುರುತು: ಎತ್ತರ 5 ಅಡಿ, ಕೋಲು ಮುಖ, ಗೋದಿ ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಸೀರೆ, ನೀಲಿ ಬಣ್ಣದ ಕುಪ್ಪಸ ಧರಿಸಿರುತ್ತಾಳೆ. ಕನ್ನಡ, ತೆಲುಗು ಭಾಷೆ ಮಾತನಾಡುತ್ತಾಳೆ.
ಕಾಣೆಯಾದ ಮಹಿಳೆಯ ಬಗ್ಗೆ ಸುಳಿವು ಸಿಕ್ಕಲ್ಲಿ ಕುರುಗೋಡು ಪೊಲೀಸ್ ಠಾಣೆಯ ಪಿಎಸ್‌ಐ ದೂ.08392-263433, ಮೊ.9480803051, ಸಿಪಿಐ ಮೊ.9480803039 ಮತ್ತು ಬಳ್ಳಾರಿ ಎಸ್‌ಪಿ ಕಚೇರಿ ದೂ.08392-258400 ಗೆ ಸಂಪರ್ಕಿಸಿ ಮಾಹಿತಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಿಳೆ ನಾಪತ್ತೆ: ಪತ್ತೆಗೆ ಮನವಿ
