ಪರೀಕ್ಷೆಯ ಒತ್ತಡವನ್ನು ನಿವಾರಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳೊಂದಿಗೆ ನಡೆಸುವ ವಾರ್ಷಿಕ ಸಂವಾದ ‘ಪರೀಕ್ಷಾ ಪೆ ಚರ್ಚಾ’ಗೆ ಈ ಬಾರಿ ಹೊಸ ಆಯಾಮ ದೊರೆತಿದೆ. ಪ್ರಧಾನಿ ಮೋದಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಲಿದ್ದು, ವಿವಿಧ ಕ್ಷೇತ್ರಗಳ ಏಳು ಸೆಲೆಬ್ರಿಟಿಗಳು ಪರೀಕ್ಷೆಯ ಸಮಯದಲ್ಲಾಗುವ ಒತ್ತಡವನ್ನು ನಿವಾರಿಸುವ ಕುರಿತು ಸಲಹೆ ನೀಡಲಿದ್ದಾರೆ. ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮವು ಫೆಬ್ರವರಿ 10ರಂದು ನವದೆಹಲಿಯಲ್ಲಿರುವ ಭಾರತ್ ಮಂಟಪದಲ್ಲಿ ನಡೆಯುತ್ತಿದೆ. ಈ ಮೊದಲು ಕೇವಲ ಪ್ರಧಾನಿಯೊಂದಿಗೆ ಮಾತ್ರ ಸಂವಾದ ನಡೆಯುತ್ತಿತ್ತು ಆದರೆ ಈಗ ಸೆಲೆಬ್ರಿಟಿಗಳು ಕೂಡ ಇದರ ಭಾಗವಾಗಿರಲಿದ್ದಾರೆ.
ಪರೀಕ್ಷಾ ಪೆ ಚರ್ಚಾದಲ್ಲಿ ಪ್ರಧಾನಿ ನರೇಂದ್ರ ಮೋದಿ 35 ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಬೇರೆ ಬೇರೆ ರಾಜ್ಯಗಳಿಂದ ಬಂದವರಾಗಿರುತ್ತಾರೆ. 50-60 ವಿದ್ಯಾರ್ಥಿಗಳು ಮತ್ತು ಇತರೆ ಪ್ರಮುಖರು ಪಾಲ್ಗೊಳ್ಳಿಲಿದ್ದಾರೆ. ಈ ಬಾರಿ ಸುಮಾರು ಆರುನೂರು ವಿದ್ಯಾರ್ಥಿಗಳು ಈ ಚರ್ಚೆಯಲ್ಲಿ ನೇರವಾಗಿ ಭಾಗವಹಿಸಿದ್ದಾರೆ.