ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆಯ ಸಂಸದರಾದ ಈ.ತುಕಾರಾಮ್ ರವರು ನವದೆಹಲಿಯಲ್ಲಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಕೇಂದ್ರ ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ದೋಣಿಮಲೈಯಲ್ಲಿರುವ ಕೇಂದ್ರ ಸರ್ಕಾರದ ಸ್ವಮ್ಯಕ್ಕೆ ಒಳಪಟ್ಟಿರುವ NMDC ಕೈಗಾರಿಕಾ ಕಂಪನಿ ಯಲ್ಲಿ ಈ ಹಿಂದೆ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ಕರ್ನಾಟಕದವರಿಗೆ ಉದ್ಯೋಗ ನೀಡದೆ, ತಾರತಮ್ಯ ಮಾಡಿರುವ ಬಗ್ಗೆ ಹಾಗೂ ಮುಂದಿನ ಎಲ್ಲಾ ನೇಮಕಾತಿಗಳಲ್ಲಿ ಕರ್ನಾಟಕ ಕೈಗಾರಿಕಾ ನೀತಿ ಮತ್ತು ಸರೋಜಿನಿ ಮಹಿಷಿ ವರದಿ ಅನುಸಾರ ಕನ್ನಡಿಗರಿಗೆ ಶೇ 80 ಮತ್ತು ಶೇ 65 ರಷ್ಟು ಉದ್ಯೋಗ ನೀಡುವ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಸಚಿವರಿಗೆ ಮನವಿ ಸಲ್ಲಿಸಿದರು.