ಮಂಗಳೂರ: ಧರ್ಮಸ್ಥಳದ ಬುರುಡೆ ಪ್ರಕರಣ ಹಾಗೂ ಸೌಜನ್ಯ ಪ್ರಕರಣದಲ್ಲಿ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಕೊನೆಗೂ ಬೆಳ್ತಂಗಡಿ ಕೋರ್ಟ್ಗೆ ಹಾಜರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಕಳೆದ ಹಲವು ದಿನಗಳಿಂದ ಬಂಧನದ ಭಯದಿಂದ ತಲೆಮರೆಸಿಕೊಂಡಿದ್ದರು ಎನ್ನಲಾಗಿದ್ದು, ಇದೀಗ ದಿಢೀರ್ ಬೆಳ್ತಂಗಡಿ ಕೋರ್ಟ್ಗೆ ಹಾಜರಾಗಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಂಟ್ ಜಾರಿಗೊಳಿಸಲಾಗಿತ್ತು. ಆದರೆ ಕೊನೆಗೂ ಅವರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ, ವಾರಂಟ್ ರದ್ದುಗೊಳಿಸುವ ಅರ್ಜಿ ಸಲ್ಲಿಸಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿ ಧರ್ಮಸ್ಥಳದಲ್ಲಿ ನಡೆದ ತಲೆಬುರುಡೆ (ಮಸ್ ಬರಿಯಲ್) ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ (ಸ್ಪೆಷಲ್ ಇನ್‌ವೆಸ್ಟಿಗೇಷನ್ ಟೀಮ್) ವಿಚಾರಣೆಗೆ ಹಾಜರಾಗಬೇಕಾಗಿತ್ತು. ಈ ಪ್ರಕರಣವು ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆಯ ಆರೋಪಗಳನ್ನು ಒಳಗೊಂಡಿದ್ದು, ಇದರಲ್ಲಿ ರಾಜಕೀಯ ಮತ್ತು ಧಾರ್ಮಿಕ ವೈರತ್ವಗಳು ತೊಡಗಿದ್ದು, ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ವಿಠಲ್ ಗೌಡ ಸೇರಿದಂತೆ ನಾಲ್ವರನ್ನು ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ಆದರೆ ತಿಮರೋಡಿ ತಪ್ಪಿಸಿಕೊಂಡಿದ್ದರು. ಇದರಿಂದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ವಾರಂಟ್ ಹೊರಡಿಸಲಾಗಿತ್ತು.


