ಮೇ 19 ರಂದು ಬಿಜೆಪಿ ವತಿಯಿಂದ ಬೆಳಗಾವಿಯಲ್ಲಿ ತಿರಂಗಾ ರ್ಯಾಲಿ

Ravi Talawar
ಮೇ 19 ರಂದು ಬಿಜೆಪಿ ವತಿಯಿಂದ ಬೆಳಗಾವಿಯಲ್ಲಿ ತಿರಂಗಾ ರ್ಯಾಲಿ
WhatsApp Group Join Now
Telegram Group Join Now
ಬೆಳಗಾವಿ.ಆಪರೇಷನ್ ಸಿಂಧೂರ ಯಶಸ್ವಿಯಾಗಿದ್ದಕ್ಕೆ ಹಾಗೂ ರಾಷ್ಟ್ರೀಯ ಭದ್ರತೆಗಾಗಿ ಭಾರತೀಯ ಸಶಸ್ತ್ರ ಪಡೆಗಳೊಂದಿಗೆ ನಾವೆಲ್ಲರೂ ಇದ್ದೇವೆ ಎಂಬ ಸಂದೇಶವನ್ನು ನೀಡುವ ಉದ್ದೇಶದಿಂದ ತಿರಂಗಾ ರ್ಯಾಲಿಯನ್ನು ಹಮ್ಮಿಕೊಂಡಿದ್ದು
ಇದೇ ಸೋಮವಾರ 19-05-2025 ರಂದು  ಸಾಯಂಕಾಲ 4:00pm ಘಂಟೆಗೆ ಬೆಳಗಾವಿ ನಗರದ  ಡಾ.ಬಿ ಆರ್ ಅಂಬೇಡ್ಕರ್ ಉದ್ಯಾನವನದಿಂದ  ಛತ್ರಪತಿ ಶಿವಾಜಿ ಮಹಾರಾಜರ ಉದ್ಯಾನವನದವರೆಗೆ, ತಿರಂಗಾ ರ್ಯಾಲಿ  ನಡೆಯಲಿದೆ .
ಅದಕ್ಕಾಗಿ    ಪಕ್ಷಾತೀತವಾಗಿ ಜಿಲ್ಲೆಯ ಎಲ್ಲ ಸಂಘಟನೆಗಳು, ಮಾಜಿ ಸೈನಿಕರು, ಕಾರ್ಮಿಕರು, ರೈತರು, ವಿದ್ಯಾರ್ಥಿಗಳು, ವಕೀಲರು, ಎಲ್ಲ ವೃತ್ತಿಪರರು,ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಿರಂಗಾ ರ್ಯಾಲಿಯನ್ನು(*tiranga rally*) ಯಶಸ್ವಿ ಗೊಳಿಸುವ ಮೂಲಕ ಸೈನಿಕರೊಂದಿಗೆ ನಾವಿದ್ದೇವೆ ಎಂಬ ಸಂದೇಶವನ್ನು ನೀಡೋಣ ಎಂದು ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷರಾದ ಸುಭಾಷ ಪಾಟೀಲ ಹಾಗೂ ಮಹಾನಗರ ಜಿಲ್ಲಾಧ್ಯಕ್ಷರಾದ ಗೀತಾ ಸುತಾರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article