ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಮುಖಂಡ ಚಿದಾನಂದ ಸವದಿ
ಅಥಣಿ: ಸತ್ತಿ ಗ್ರಾಮದಿಂದ ಅಡಹಳಟ್ಟಿ ಗ್ರಾಮಕ್ಕೆ ಕೆಲಸದ ನಿಮಿತ್ತ ಹೊರಟಿದ್ದ ಟಾಟಾ ಏಸ್ ವಾಹನವೊಂದು ಟೈರ್ ಒಡೆದು ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾದ ಘಟನೆ ನಡೆದಿದೆ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕೂಲಿ ಕೆಲಸಕ್ಕೆ ಹೋರಟಿದ್ದ 32 ಜನ ಮಹಿಳಾ ಕೂಲಿ ಕಾರ್ಮಿಕರಿದ್ದ ವಾಹನ ಪಲ್ಟಿಯಾಗಿ ಗಾಯಗೊಂಡ ಕಾರ್ಮಿಕರನ್ನು ಕೂಡಲೇ ಅಥಣಿಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಅಥಣಿ ತಾಲೂಕಿನ ಯಕ್ಕಂಚಿ ಗ್ರಾಮದ ಬಳಿ ಮಂಗಳವಾರ ಬೆಳಗಿನ ಜಾವ ಟಾಯರ್ ಒಡೆದು ಪರಿಣಾಮ ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 32 ಜನ ಕೂಲಿ ಕಾರ್ಮಿಕರು ಗಂಬೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಕೆಲವು ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರ ಪುತ್ರ ಚಿದಾನಂದ ಸವದಿ ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ಧಾವಿಸಿದರು. ಗಾಯಾಳುಗಳ ಆರೋಗ್ಯ ವಿಚಾರಿಸಿ ಅವರಿಗೆ ಧೈರ್ಯ ತುಂಬುವ ಕಾಯಕ ಮಾಡಿದ್ದು ಅಲ್ಲದೆ ವೈದ್ಯರೊಂದಿಗೆ ಮಾತನಾಡಿ ಎಲ್ಲ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದರು. ಈ ಕುರಿತು ಐಗಳಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ವೇಳೆ ಜೇಡೆಪ್ಪ ಕುಂಬಾರ, ಪ್ರದೀಪ ನಂದಗಾಂವ, ಮಂಜು ನೂಲಿ, ಮಹಾಂತೇಶ ಠಕ್ಕಣ್ಣವರ, ಅಜಯ ಮಂಗಸೂಳಿ, ವಿಜಯ ರಜಪೂತ, ರಾಹುಲ ನಾಯಿಕ, ಆನಂದ ಮಾದಗುಡಿ, ತಾಲೂಕು ವೈಧ್ಯಾಧಿಕಾರಿ ಬಸನಗೌಡ ಕಾಗೆ, ಸಿಪಿಐ. ಸಂತೋಷ ಹಳ್ಳೂರ, ಐಗಳಿ ಪಿಎಸ್ಐ ಚಂದ್ರಶೇಖರ ಸಾಗನೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.