ಇಂದು ಒಂದೇ ದಿನ ಬರೋಬ್ಬರಿ 15 ವಿಧೇಯಕಗಳ ಮಂಡನೆ

Ravi Talawar
ಇಂದು ಒಂದೇ ದಿನ ಬರೋಬ್ಬರಿ 15 ವಿಧೇಯಕಗಳ ಮಂಡನೆ
WhatsApp Group Join Now
Telegram Group Join Now

ಬೆಂಗಳೂರು: ವಿಧಾನಸಭೆ ಅಧಿವೇಶದನ ಎರಡನೇ ದಿನವಾದ ಇಂದು ಒಂದೇ ದಿನ ಬರೋಬ್ಬರಿ 15 ವಿಧೇಯಕಗಳನ್ನು ಮಂಡಿಸಲಾಗಿದೆ. ಗೃಹ ಸಚಿವ ಪರಮೇಶ್ವರ್, ಆರೋಗ್ಯ ದಿನೇಶ್ ಗುಂಡೂರಾವ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಉನ್ನತ ಶಿಕ್ಷಣ ಸಚಿವ ಸುಧಕಾರ್ ಹಾಗೂ ಬೋಸರಾಜ ಪರವಾಗಿ ಎಲ್ಲಾ 15 ವಿಧೇಯಕಗಳನ್ನ ಕಾನೂನು ಸಚಿವ ಎಚ್ ಕೆ ಪಾಟೀಲ್ ಅವರು ಮಂಡಿಸಿದರು.

  1. 2025ನೇ ಸಾಲಿನ ಕರ್ನಾಟಕ ಅಗ್ನಿಶಾಮಕದಳ (ತಿದ್ದುಪಡಿ) ವಿಧೇಯಕ ಮಂಡನೆ.
  2.  2025ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳ ಮತ್ತು ಇತರ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕ ಮಂಡನೆ.
  3.  2025ನೇ ಸಾಲಿನ ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕ ಮಂಡನೆ.
  4.  2025ನೇ ಸಾಲಿನ ಕರ್ನಾಟಕ ವೈದ್ಯಕೀಯ ನೋಂದಣಿ (ತಿದ್ದುಪಡಿ) ವಿಧೇಯಕ ಮಂಡನೆ.
  5. 2025ನೇ ಸಾಲಿನ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ ಮಂಡನೆ.
  6.  2025ನೇ ಸಾಲಿನ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
  7. 2025ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
  8.  2025ನೇ ಸಾಲಿನ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
  9.  2025ನೇ ಸಾಲಿನ ಕೂಡಲ ಸಂಗಮ ಅಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ ಮಂಡನೆ.
  10.  2025ನೇ ಸಾಲಿನ ಬನವಾಸಿ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
  11.  2025ನೇ ಸಾಲಿನ ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
  12.  2025ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ವಿಧೇಯಕ ಮಂಡನೆ.
  13.  2025ನೇ ಸಾಲಿನ ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ) ವಿಧೇಯಕ ಮಂಡನೆ.
  14.  2025ನೇ ಸಾಲಿನ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
  15. ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಅವರಿಂದ ಒಂದು ವಿಧೇಯಕ ಮಂಡನೆ.
  16.  2025ನೇ ಸಾಲಿನ ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ವಿಧೇಯಕ ಮಂಡನೆ.
WhatsApp Group Join Now
Telegram Group Join Now
Share This Article