ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ, ಹಲವೆಡೆ ಭೂಕುಸಿತವಾಗುತ್ತಿದ್ದು, ಮಳೆ ಬಿಟ್ಟೂ ಬಿಡದೆ ಸುರಿಯುತ್ತಿದೆ. 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಕೊಡಗಿಗೆ ಆರೆಂಜ್ ಅಲರ್ಟ್ ಇದ್ದು, ಮೈಸೂರು, ಹಾಸನ, ಬಳ್ಳಾರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೀದರ್ಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ತುಮಕೂರು, ವಿಜಯನಗರದಲ್ಲೂ ಮಳೆಯಾಗಿದೆ.
ಭಾಗಮಂಡಲ, ಕದ್ರಾ, ಕುಮಟಾ, ಅಂಕೋಲಾ, ಕಾರವಾರ, ಹೊನ್ನಾವರ, ಗೋಕರ್ಣ, ಆಗುಂಬೆ, ಶಿರಾಲಿ, ಹಳಿಯಾಳ, ಉಡುಪಿ, ಲೋಂಡಾ, ಸೋಮವಾರಪೇಟೆ, ಮಂಗಳೂರು ವಿಮಾನ ನಿಲ್ದಾಣ, ಗೇರುಸೊಪ್ಪ, ಸಿದ್ದಾಪುರ, ಧರ್ಮಸ್ಥಳ, ಯಲ್ಲಾಪುರ, ಕಾರ್ಕಳ, ಲಿಂಗನಮಕ್ಕಿ, ಜಯಪುರ, ಕಳಸ, ಪುತ್ತೂರು, ಮಾಣಿ, ಪಣಂಬೂರು, ಕಮ್ಮರಡಿ, ಶೃಂಗೇರಿಯಲ್ಲಿ ಮಳೆಯಾಗಿದೆ.