ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಧಾರಾಕಾರ ಮಳೆ

Ravi Talawar
ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಧಾರಾಕಾರ ಮಳೆ
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆ ಅಲರ್ಟ್​: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ, ರಾಮನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ಕಲಬುರಗಿ, ಹಾವೇರಿ, ಧಾರವಾಡ, ಬೀದರ್ ಹಾಗೂ ಬೆಳಗಾವಿ ಜಿಲ್ಲೆಗಳಲ್ಲೂ ಕೂಡ ಸಾಧಾರಣ ಮಳೆಯಾಗಲಿದೆ.

ಎಲ್ಲೆಲ್ಲಿ ಮಳೆ?: ಆಗುಂಬೆ, ಕಾರ್ಕಳ, ಮಂಗಳೂರು, ಬಾದಾಮಿ, ಕುಷ್ಟಗಿ, ಮುದ್ದೇಬಿಹಾಳ, ಬೀದರ್, ನರಗುಂದ, ಕುಣಿಗಲ್, ಹಳಿಯಾಳ, ಕಲಘಟಗಿ, ಸೇಡಂ, ಯಲಬುರ್ಗಾ ಹಾಗೂ ತಿಪಟೂರಿನಲ್ಲಿ ಗುರುವಾರ ಹೆಚ್ಚಿನ ಮಳೆಯಾಗಿದೆ.

WhatsApp Group Join Now
Telegram Group Join Now
Share This Article