ಬಳ್ಳಾರಿ,ಜ.03: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಟಿ.ಶ್ಯಾಮ್ ಭಟ್ ಹಾಗೂ ನ್ಯಾಯಾಂಗ ಸದಸ್ಯರಾದ ಎಸ್.ಕೆ.ವಂಟಿಗೋಡಿ ಅವರು ಜ.08 ಮತ್ತು 09 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.
ಜ.08 ರಂದು ಮಧ್ಯಾಹ್ನ ಬೆಂಗಳೂರಿನಿAದ ಹೊರಟು, ಸಂಜೆ 07.30 ಗಂಟೆಗೆ ಬಳ್ಳಾರಿಗೆ ಆಗಮಿಸುವರು. ಬಳಿಕ ಜಿಂದಾಲ್‌ನ ಸರ್ಕ್ಯೂಟ್ ಹೌಸ್‌ನಲ್ಲಿ ವಾಸ್ತವ್ಯ ಮಾಡುವರು.
ಜ.09 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 01 ಗಂಟೆಯವರೆಗೆ ಬಳ್ಳಾರಿಯ ವಿವಿಧ ಸ್ಥಳಗಳಿಗೆ ಭೇಟಿ ನೀಡುವರು. ಮಧ್ಯಾಹ್ನ 03.30 ಗಂಟೆಯಿAದ ಸಂಜೆ 04.30 ಗಂಟೆಯವರೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಂವಾದ ಸಭೆ ನಡೆಸುವರು. ಬಳಿಕ ಸಂಜೆ 04.30 ರಿಂದ 05.30 ರವರೆಗೆ ಪತ್ರಿಕಾಗೋಷ್ಠಿ ನಡೆಸುವರು.
ನಂತರ ಸಂಜೆ 06 ಗಂಟೆಗೆ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಆಪ್ತ ಕಾರ್ಯದರ್ಶಿ ಅರುಣ್ ಪೂಜಾರ್ ಅವರು ತಿಳಿಸಿದ್ದಾರೆ.