ಬೆಂಗಳೂರು, ನವೆಂಬರ್ 09: ಬೆಂಗಳೂರಿನ ಶಿವಾಜಿನಗರ ಸುತ್ತಮುತ್ತ ಎಲ್ಲಾ ಮಾದರಿಯ ವಾಹನ ಸಂಚಾರವನ್ನು ಒಂದು ತಿಂಗಳಕಾಲ ನಿರ್ಭಂದಿಸಲಾಗಿದೆ.
ಈ ಕುರಿತು ಬೆಂಗಳೂರು ಸಂಚಾರಿ ಪೊಲೀಸರು ಸಾಮಾಜಿಕ ಮಾಧ್ಯಮ ಎಕ್ಸ್ ಮುಖಾಂತರ ತಿಳಿಸಿದ್ದಾರೆ. ಶಿವಾಜಿ ಸರ್ಕಲ್ ಮತ್ತು ಜ್ಯೋತಿ ಕೆಫೆ ಬಳಿ ಮೆಟ್ರೋ (ಬಿಎಂಆರ್ಸಿಎಲ್) ವತಿಯಿಂದ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸೋಮವಾರ (ನ.11) ರಿಂದ 30 ದಿನಗಳ ಕಾಲ ಈ ಕೆಳಗಿನ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.