ನೇಸರಗಿ: ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರು ಹಾಗೂ ಕೃಷಿ ಚಿಂತಕರಾದ ಮಾನ್ಯ ಡಾ. ಪ್ರಭಾಕರ ಬ. ಕೋರೆಯವರ ೭೮ ನೇ ಹುಟ್ಟುಹಬ್ಬದ ಅಂಗವಾಗಿ ೨೬ ನೇ ಕಾರ್ಯಕ್ರಮವಾಗಿ ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರ, ಮತ್ತಿಕೊಪ್ಪ, ರೈತ ಉತ್ಪಾದಕ ಸಂಸ್ಥೆಗಳ ಉತ್ಕೃ? ಕೇಂದ್ರ, ಬೆಂಗಳೂರು ಹಾಗೂ ಜಲಾನಯನ ಮತ್ತು ತೋಟಗಾರಿಕೆ ಇಲಾಖೆ, ಬೆಳಗಾವಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟ ಇವರ ಸಹಯೋಗದಲ್ಲಿ ಜಲಾನಯನ ಮತ್ತು ತೋಟಗಾರಿಕೆ ಇಲಾಖೆ ಪ್ರೋತ್ಸಾಹಿತ ಅಮೃತ ರೈತ ಉತ್ಪಾದಕರ ಸಂಸ್ಥೆಗಳ ಪದಾಧಿಕಾರಿಗಳಿಗೆ ರೈತ ಉತ್ಪಾದಕ ಕಂಪನಿಗಳ ರಚನೆ, ಜವಾಬ್ದಾರಿಗಳು, ಆಡಳಿತಾತ್ಮಕ ನಿರ್ವಹಣೆ ಹಾಗೂ ಮೌಲ್ಯವರ್ಧನೆ ವಿಶ್ಲೇ?ಣೆ ಕುರಿತು ಎರಡು ದಿನಗಳ ತರಬೇತಿ ಕಾರ್ಯಕ್ರಮವನ್ನು ಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು. ಕೇಂದ್ರದ ಮುಖ್ಯಸ್ಥರಾದ ಡಾ. ಮಂಜುನಾಥ ಚೌರಡ್ಡಿಯವರು ತರಬೇತಿ ಕಾರ್ಯಕ್ರಮವನ್ನು ಉದ್ಘಾಟನೆಗೊಳಿಸಿದರು. ನಂತರ ಮಾತನಾಡಿದ ಅವರು, ರೈತರ ಗುಂಪನ್ನು ಬಲಪಡಿಸಲು ಹಾಗೂ ಪರಸ್ಪರ ಸಂಪರ್ಕದೊಂದಿಗೆ ಕೃಷಿಯನ್ನು ಲಾಭದಾಯಕ ಮಾಡುವ ಹಾಗೂ ಉತ್ತಮ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ದೃಷ್ಟಿಯಿಂದ ದೇಶದಲ್ಲಿ ೧೦,೦೦೦ ರೈತ ಉತ್ಪಾದಕ ಸಂಸ್ಥೆಗಳನ್ನು ರಚನೆ ಮಾಡಲಾಗುತ್ತಿದೆ. ಈ ಸಂಸ್ಥೆಗಳ ಮೂಲಕ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವ ದೃಷ್ಟಿಯಿಂದ ರೈತರಿಗೆ ಅನೇಕ ತಂತ್ರಜ್ಞಾನಗಳ ಮಾಹಿತಿಯನ್ನು ರೈತ ಉತ್ಪಾದಕ ಸಂಸ್ಥೆಯ ಸದಸ್ಯರಿಗೆ ಕಾಲಕಾಲಕ್ಕೆ ಕೃಷಿ ವಿಜ್ಞಾನ ಕೇಂದ್ರಗಳ ಮೂಲಕ ನೀಡಿ ರೈತರನ್ನು ಆರ್ಥಿಕವಾಗಿ ಸಬಲಗೊಳಿಸುವುದು ಮುಖ್ಯ ಉದ್ದೇಶವಾಗಿದೆ ಎಂದರು. ಈ ಹಿನ್ನಲೆಯಲ್ಲಿ ರೈತ ಉತ್ಪಾದಕ ಸಂಸ್ಥೆಯ ಸದಸ್ಯರು ಕೃಷಿ ವಿಜ್ಞಾನ ಕೇಂದ್ರದ ಸಂಪರ್ಕವಿಟ್ಟುಕೊಂಡು ಉತ್ಪಾದಕತೆ ಹೆಚ್ಚಿಸಬೇಕೆಂದು ಕರೆ ನೀಡಿದರು.
ಬೆಂಗಳೂರಿನ ರೈತ ಉತ್ಪಾದಕ ಸಂಸ್ಥೆಗಳ ಉತ್ಕೃ? ಕೇಂದ್ರದ ಹಿರಿಯ ಸಲಹೆಗಾರರಾದ ಜಯಣ್ಣ ವಾಯ್. ಆರ್. ಪ್ರಾಸ್ತಾವಿಕವಾಗಿ ಮಾತನಾಡಿ, ರೈತ ಉತ್ಪಾದಕ ಸಂಸ್ಥೆಗಳ ಕಾರ್ಯಕ್ಷಮತೆಯನ್ನು ಬಲಪಡಿಸಲು ರೈತ ಉತ್ಪಾದಕ ಸಂಸ್ಥೆಗಳ ಉತ್ಕೃ? ಕೇಂದ್ರದ ವತಿಯಿಂದ ರೈತ ಉತ್ಪಾದಕ ಕಂಪನಿಗಳ ರಚನೆ, ಜವಾಬ್ದಾರಿಗಳು, ಆಡಳಿತ್ಮಾಕ ನಿರ್ವಹಣೆ ಹಾಗೂ ಮೌಲ್ಯ ಸರಪಳಿ ವಿಶ್ಲೇ?ಣೆ ಕುರಿತು ರಾಜ್ಯದ ರೈತ ಉತ್ಪಾದಕ ಸಂಸ್ಥೆಗಳಿಗೆ ತರಬೇತಿಯನ್ನು ಕಾಲಕಾಲಕ್ಕೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು ಹಾಗೂ ಸದಸ್ಯರು ಈ ಕಾರ್ಯಕ್ರಮದ ಪ್ರಯೋಜನ ಪಡೆದು ಸಂಸ್ಥೆಯ ಕಾರ್ಯಕ್ಷಮತೆಯನ್ನು ಉತ್ತಮಪಡಿಸಬೇಕೆಂದು ತಿಳಿಸಿದರು. ಕೇಂದ್ರದ ವಿಜ್ಞಾನಿ ಎಸ್. ಎಮ್. ವಾರದ ನೈಸರ್ಗಿಕ ಕೃಷಿ ಕುರಿತು ಉಪನ್ಯಾಸ ನೀಡಿದರು. ಪ್ರವೀಣ ಯಡಹಳ್ಳಿ ಕಾರ್ಯಕ್ರಮದಲ್ಲಿ ಸ್ವಾಗತಿಸಿ ವಂದಿಸಿದರು, ಕೇಂದ್ರದ ಸಿಬ್ಬಂದಿ ಶಂಕರಗೌಡ ಪಾಟೀಲ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮಂಜುನಾಥ ಚೌರಡ್ಡಿ
ಹಿರಿಯ ವಿಜ್ಞಾನಿಗಳು ಹಾಗೂ ಮುಖ್ಯಸ್ಥರು