ಸಾರಿಗೆ ನೌಕರರು ಮುಷ್ಕರ; ಪೂರ್ಣ ಪ್ರಮಾಣದಲ್ಲಿ ರಸ್ತೆಗಿಳಿಯದ ಬಸ್‌ಗಳು

Ravi Talawar
ಸಾರಿಗೆ ನೌಕರರು ಮುಷ್ಕರ; ಪೂರ್ಣ ಪ್ರಮಾಣದಲ್ಲಿ ರಸ್ತೆಗಿಳಿಯದ ಬಸ್‌ಗಳು
WhatsApp Group Join Now
Telegram Group Join Now

ಬೆಂಗಳೂರು, ಆಗಸ್ಟ್ 5: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸಾರಿಗೆ ನೌಕರರು ಮುಷ್ಕರ  ಆರಂಭಿಸಿದ್ದಾರೆ. ಇದರಿಂದಗಿ ಸಾರ್ವಜನಿಕರಿಗೆ ಆತಂಕ ಶುರುವಾಗಿದೆ. ಬಿಎಂಟಿಸಿ, ಕೆಎಸ್​ಆರ್​ಟಿಸಿ ಬಸ್‌ಗಳನ್ನೇ ಅವಲಂಬಿಸಿರುವ ಜನರು ಕೆಲಸಗಳಿಗೆ, ಶಾಲೆಗಳಿಗೆ ಕಾಲೇಜುಗಳಿಗೆ ಹೋಗಲು ಪರದಾಡಬೇಕಾದ ಆತಂಕದಲ್ಲಿದ್ದಾರೆ. ಹೀಗಿದ್ದರೂ, ಯಾವುದೇ ಚಿಂತೆ ಬೇಡ ಎಂದು ಸಾರ್ವಜನಿಕರಿಗೆ ರಾಜ್ಯ ಸರ್ಕಾರ ಅಭಯ ನೀಡಿದೆ. ಯಾಕೆಂದರೆ, ಸಾರಿಗೆ ನಿಗಮಗಳು ತಮ್ಮದೇ ಆದ ವ್ಯವಸ್ಥೆಗಳನ್ನು ಮಾಡಿಕೊಂಡಿವೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.

ರಾಜ್ಯ ಸರ್ಕಾರದ ಈ ಸೂಚನೆ ಬೆನ್ನಲ್ಲೇ ಹಲವು ಜಿಲ್ಲೆಗಳಲ್ಲಿ ಪರ್ಯಾಯ ವ್ಯವಸ್ಥೆಯನ್ನು ಸಾರಿಗೆ ನಿಗಮಗಳು ಮಾಡಿಕೊಂಡಿವೆ. ಬೆಂಗಳೂರಿನಲ್ಲಿ ಸಾರಿಗೆ ಮುಷ್ಕರದಿಂದಾಗಿ ಬಿಎಂಟಿಸಿ ಬಸ್‌ಗಳ ಸಂಚಾರ ಭಾಗಶಃ ಸ್ಥಗಿತವಾಗಿದೆ. ಹೀಗಾಗಿ, ಬೆಂಗಳೂರು ಒಂದರಲ್ಲೇ 4 ಸಾವಿರ ಖಾಸಗಿ ಬಸ್‌ಗಳನ್ನ ನೀಡುವಂತೆ ಖಾಸಗಿ ಬಸ್‌ ಮಾಲೀಕರ ಸಂಘಕ್ಕೆ ಸಾರಿಗೆ ಆಯುಕ್ತರು ಬೇಡಿಕೆ ಇಟ್ಟಿದ್ದಾರೆ. ರಾಜ್ಯಾದ್ಯಂತ 11 ಸಾವಿರ ಬಸ್‌ ಕೇಳಿದ್ದಾರೆ. ಆದರೆ, ಇನ್ನೂ ಅಂತಿಮಗೊಳಿಸಿಲ್ಲ ಎಂದು ಖಾಸಗಿ ಬಸ್‌ ಮಾಲೀಕರ ಸಂದ ನಟರಾಜ್‌ ಶರ್ಮಾ ‘ಟಿವಿ9’ಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಬುಧವಾರಕ್ಕೆ ಬಸ್‌ ನೀಡುವಂತೆ ಕೋರಿದ್ದಾರೆ ಎಂದಿರುವುದು ಹೊಸ ಗೊಂದಲ ಸೃಷ್ಟಿಸಿದೆ.
WhatsApp Group Join Now
Telegram Group Join Now
Share This Article