ಬೆಳಗಾವಿ.ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯದ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ ಅವರು ಇಂದು ನಗರದ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲಾ ಕಾರ್ಯಾಲಯಕ್ಕೆ ಭೇಟಿ ನೀಡಿ ಸಂಘಟನಾತ್ಮಕ ಸಭೆಯಲ್ಲಿ ಭಾಗವಹಿಸಿದರು.
ಇದಕ್ಕೂ ಮೊದಲು ನಿನ್ನೆ ತಡರಾತ್ರಿ ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್.ಎಮ್.ಕೃಷ್ಣಾ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮೌನಾಚರಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ, ಮಾಜಿ ಶಾಸಕರಾದ ಸಂಜಯ್ ಪಾಟೀಲ್, ರಾಷ್ಟ್ರೀಯ ಓ.ಬಿ.ಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಲಕ್ಷ್ಮಣ ತಪಸಿ, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಈರಣ್ಣ ಅಂಗಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ್ ಮಾದಮ್ಮನವರ, ಸಂದೀಪ್ ದೇಶಪಾಂಡೆ, ಧನಶ್ರೀ ದೇಸಾಯಿ, ರಾಜ್ಯ ಮಾಧ್ಯಮ ಸಮಿತಿ ಸದಸ್ಯ ಶರತ್ ಹಾಗೂ ಪ್ರಮುಖ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.