ಗಾಜಾದಲ್ಲಿ ಶಾಂತಿ ಸ್ಥಾಪನೆಗಾಗಿ ಟ್ರಂಪ್ ನಾಯಕತ್ವ; ಮೋದಿ ‍ಶ್ಲಾಘನೆ

Ravi Talawar
ಗಾಜಾದಲ್ಲಿ ಶಾಂತಿ ಸ್ಥಾಪನೆಗಾಗಿ ಟ್ರಂಪ್ ನಾಯಕತ್ವ; ಮೋದಿ ‍ಶ್ಲಾಘನೆ
WhatsApp Group Join Now
Telegram Group Join Now

ನವದೆಹಲಿ, ಅಕ್ಟೋಬರ್ 4: ತೆರಿಗೆ ಸಮರ ಹಾಗೂ ನಂತರದ ಬೆಳವಣಿಗೆಗಳಿಂದ ಭಾರತ-ಅಮೆರಿಕ ನಡುವಣ ಸಂಬಂಧ ಹದಗೆಡುತ್ತಲೇ ಹೋಗಿದ್ದು ಎಲ್ಲರಿಗೂ ತಿಳಿದಿದೆ. ಇದೀಗ, ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಶ್ಲಾಘಿಸಿದ್ದಾರೆ. ಇಸ್ರೇಲ್-ಗಾಜಾ ನಡುವಣ ಸಂಘರ್ಷ ಕೊನೆಗೊಳಿಸುವ ನಿಟ್ಟಿನಲ್ಲಿ ಟ್ರಂಪ್ ಪ್ರಯತ್ನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಈ ವಿಚಾರದಲ್ಲಿ ಟ್ರಂಪ್ ನಾಯಕತ್ವವನ್ನು ಸ್ವಾಗತಿಸುತ್ತೇವೆ ಎಂದಿದ್ದಾರೆ. ಅಲ್ಲದೆ, ಗಾಜಾದಲ್ಲಿ ಶಾಂತಿ ಸ್ಥಾಪನೆ ಕಾರ್ಯದಲ್ಲಿ ನಿರ್ಣಾಯಕ ಪ್ರಗತಿ ಸಾಧಿಸಲಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

WhatsApp Group Join Now
Telegram Group Join Now
Share This Article