ವಾಷಿಂಗ್ಟನ್: ಪರಮಾಣು ಬಾಂಬ್ ತಯಾರಿಕಾ ಯೋಜನೆಯಲ್ಲಿ ನಿರತವಾಗಿರುವ ಇರಾನ್ ಸರ್ಕಾರ ತನ್ನ ‘ಒಪ್ಪಂದ’ಕ್ಕೆ ಸಹಿ ಹಾಕದಿದ್ದರೆ ಆ ದೇಶದ ಮೇಲೆ ಬಾಂಬ್ ಗಳ ಸುರಿಮಳೆ ಸುರಿಸುತ್ತೇನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.
ಇರಾನ್ ತನ್ನ ಪರಮಾಣು ಕಾರ್ಯಕ್ರಮದ ಕುರಿತು ವಾಷಿಂಗ್ಟನ್ ಜೊತೆ ಒಪ್ಪಂದಕ್ಕೆ ಬಾರದಿದ್ದರೆ ಬಾಂಬ್ ದಾಳಿ ಮತ್ತು ದುಪ್ಪಟ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಇರಾನ್‌ಗೆ ಎಚ್ಚರಿಕೆ ನೀಡಿದ್ದಾರೆ.
ಎನ್‌ಬಿಸಿ ನ್ಯೂಸ್‌ಗೆ ನೀಡಿದ ದೂರವಾಣಿ ಸಂದರ್ಶನದಲ್ಲಿ ಮಾತನಾಡಿದ ಟ್ರಂಪ್, ‘ಅಮೆರಿಕ ಮತ್ತು ಇರಾನಿನ ಅಧಿಕಾರಿಗಳು ಮಾತನಾಡುತ್ತಿದ್ದಾರೆ. ಇರಾನ್ ತನ್ನ ಪರಮಾಣು ಯೋಜನೆಗಳನ್ನು ಮುಂದುವರೆಸಬಾರದು. ಕೂಡಲೇ ಅವುಗಳನ್ನು ನಿಲ್ಲಿಸಬೇಕು ಎಂಬುದು ನಿಲುವಾಗಿದೆ ಎಂದು ಟ್ರಂಪ್ ಹೇಳಿದರು.
ಇದೇ ವೇಳೆ ಇರಾನ್ ತನ್ನ ಜೊತೆ ಒಪ್ಪಂದ ಮಾಡಿಕೊಳ್ಳದಿದ್ದರೆ, ಬಾಂಬ್ ದಾಳಿ ನಡೆಯಲಿದೆ ಎಂದ ಟ್ರಂಪ್, “ಇರಾನ್ ಒಪ್ಪಂದ ಮಾಡಿಕೊಳ್ಳದಿದ್ದರೆ, ನಾನು ನಾಲ್ಕು ವರ್ಷಗಳ ಹಿಂದೆ ಮಾಡಿದಂತೆ ಅವರ ಅವರ ವಿರುದ್ಧ ದ್ವಿತೀಯ ಸುಂಕ ವಿಧಿಸುವ ಅವಕಾಶವಿದೆ ಎಂದು ಹೇಳಿದರು.